Select Your Language

Notifications

webdunia
webdunia
webdunia
webdunia

ಬಿಜೆಪಿ ಸೋಲಿನ ಜವಾಬ್ದಾರಿ ನಾನೇ ಹೊರುತ್ತೇನೆ : ಬೊಮ್ಮಾಯಿ

ಬಿಜೆಪಿ ಸೋಲಿನ ಜವಾಬ್ದಾರಿ ನಾನೇ ಹೊರುತ್ತೇನೆ : ಬೊಮ್ಮಾಯಿ
ಬೆಂಗಳೂರು , ಭಾನುವಾರ, 14 ಮೇ 2023 (09:36 IST)
ಬೆಂಗಳೂರು : ಈ ಬಾರಿಯ ಚುನಾವಣೆಯಲ್ಲಿ ಜನರ ತೀರ್ಪನ್ನು ನಾನು ಸಂಪೂರ್ಣವಾಗಿ ಒಪ್ಪಿಕೊಳ್ಳುತ್ತೇನೆ. ಬಿಜೆಪಿಯ ಈ ಸೋಲಿನ ಜವಾಬ್ದಾರಿಯನ್ನು ನಾನೇ ಹೊರುತ್ತೇನೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಶನಿವಾರ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ ಹೀನಾಯವಾಗಿ ಸೋಲು ಕಂಡಿದೆ. ಇದರ ಬೆನ್ನಲೇ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾತ್ರಿ ರಾಜಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾದ ಬೊಮ್ಮಾಯಿ ರಾಜೀನಾಮೆ ಸಲ್ಲಿಸಿದ್ದಾರೆ.

ಕಾಂಗ್ರೆಸ್ ಬಹುಮತದಿಂದ ಗೆಲುವು ಸಾಧಿಸುತ್ತಿದ್ದಂತೆ ಮಾಧ್ಯಮಗಳೊಂದಿಗೆ ಮಾತನಾಡಿದ ಬೊಮ್ಮಾಯಿ, ಕಳೆದ ಬಾರಿ ನಮಗೆ 104 ಸೀಟು ಬಂದಿತ್ತು. ಈ ಬಾರಿ ಪರ್ಸೆಂಟೇಜ್ ಜಾಸ್ತಿ ಬಂದಿದ್ದರೂ ಕಡಿಮೆ ಸೀಟು ಬಂದಿವೆ. ಏನೇ ಆಗಲಿ ಸೋಲು ಸೋಲೇ. ನಾವು ಇದರ ಬಗ್ಗೆ ಆತ್ಮಾವಲೋಕನ ಮಾಡುತ್ತೇವೆ. ಎಲ್ಲಿ ತಪ್ಪು ಆಗಿದೆ ಅದನ್ನು ಸರಿಪಡಿಸುವ ಕೆಲಸ ಮಾಡುತ್ತೇವೆ ಎಂದು ವಿಷಾದ ವ್ಯಕ್ತಪಡಿಸಿದರು. 

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ ಗೆದ್ದಿದ್ದಕ್ಕೆ ರಾಹುಲ್ ಗಾಂಧಿಯನ್ನು ಅಭಿನಂದಿಸಿದ್ರಾ ಕೊಹ್ಲಿ?!