Select Your Language

Notifications

webdunia
webdunia
webdunia
webdunia

ಅಭಿವೃದ್ಧಿ ಮಾಡೋದಾಗಿ ರಕ್ತದಲ್ಲಿ ಬರೆದುಕೊಡ್ತೆನೆ: ಯಡಿಯೂರಪ್ಪ

ಅಭಿವೃದ್ಧಿ ಮಾಡೋದಾಗಿ ರಕ್ತದಲ್ಲಿ ಬರೆದುಕೊಡ್ತೆನೆ: ಯಡಿಯೂರಪ್ಪ
ಗುಂಡ್ಲುಪೇಟೆ , ಗುರುವಾರ, 23 ಮಾರ್ಚ್ 2017 (15:14 IST)
ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರವನ್ನು ಅಭಿವೃದ್ಧಿ ಮಾಡೋದಾಗಿ ರಕ್ತದಲ್ಲಿ ಬರೆದುಕೊಡ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ.
 
ಗುಂಡ್ಲುಪೇಟೆ ಮತ್ತು ನಂಜನಗೂಡು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಜಯಗಳಿಸಿದಲ್ಲಿ ಕ್ಷೇತ್ರದಲ್ಲಿರುವ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುತ್ತೇನೆ ಎಂದು ದೇವರಲ್ಲಿ ಪ್ರಮಾಣ ಮಾಡುವುದಾಗಿ ತಿಳಿಸಿದ್ದಾರೆ.
 
ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರಕ್ಕೆ ಅಭಿವೃದ್ಧಿಯಲ್ಲಿ ಆಸಕ್ತಿಯಿಲ್ಲ. ಕಾಂಗ್ರೆಸ್ಸಿಗರಿಗೆ ಸ್ವ-ಅಭಿವೃದ್ಧಿಯಲ್ಲಿ ಆಸಕ್ತಿಯಿದೆ ಎಂದು ಲೇವಡಿ ಮಾಡಿದರು.  
 
ವಿಧಾನಸಭೆ ಕಲಾಪದಲ್ಲಿ ಮಾಧ್ಯಮಗಳ ಮೇಲೆ ಬಂದಿರುವ ಆರೋಪಗಳ ಬಗ್ಗೆ ಪ್ರತಿಕ್ರಿಯೆ ನೀಡಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನಿರಾಕರಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ವಿರುದ್ಧ ಹಕ್ಕುಚ್ಯುತಿ ನಿರ್ಣಯ ಮಂಡಿಸಿದ ಜಗದೀಶ್ ಶೆಟ್ಟರ್