ನನಗೆ ಸಿಟ್ಟು ಬರುವುದಿಲ್ಲ, ನನ್ನ ಗಟ್ಟಿ ಧ್ವನಿ ಮ್ಯಾನುಫ್ಯಾಕ್ಚರಿಂಗ್ ಡಿಫೆಕ್ಟ್ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಲೋಕಸಭೆಯಲ್ಲಿ ಮಾತನಾಡಿದ ಅವರು, ಕ್ರಿಮಿನಲ್ ಪ್ರೊಸೀಜರ್ ಮಸೂದೆ ಅನ್ನು ಸದನದಲ್ಲಿ ಪರಿಗಣನೆಗೆ ಮತ್ತು ಅಂಗೀಕಾರಕ್ಕಾಗಿ ಅಮಿತ್ ಶಾ ಮಂಡಿಸಿದ್ದಾರೆ. ಅಪರಾಧದ ತನಿಖೆಯನ್ನು ಹೆಚ್ಚು ಪರಿಣಾಮಕಾರಿಯಾಗಿ ಮತ್ತು ತ್ವರಿತವಾಗಿ ಮಾಡಲು ಮತ್ತು ಶಿಕ್ಷೆಯ ಪ್ರಮಾಣವನ್ನು ಹೆಚ್ಚಿಸುವ ಗುರಿಯನ್ನು ಈ ಮಸೂದೆ ಹೊಂದಿದೆ ಎಂದು ಹೇಳಿದರು. ಪ್ರತಿಪಕ್ಷ ಸದಸ್ಯರು ಟೀಕೆ ಮಾಡಿದಾಗ, ಕೋಪದ ಸ್ವರದಲ್ಲಿ ಪ್ರತಿಕ್ರಿಯಿಸುತ್ತಾರೆ ಎಂದು ತೃಣಮೂಲ ಕಾಂಗ್ರೆಸ್ ಸದಸ್ಯರೊಬ್ಬರು ಲಘು ಧಾಟಿಯಲ್ಲಿ ವ್ಯಂಗ್ಯವಾಡಿದಾಗ, ನಾನು ಯಾವತ್ತೂ ಯಾರನ್ನೂ ಬೈಯುವುದಿಲ್ಲ. ನನ್ನ ಧ್ವನಿ ಸ್ವಲ್ಪ ಗಟ್ಟಿಯಾಗಿದೆ. ನಾನು ಕೋಪಗೊಳ್ಳುವುದಿಲ್ಲ, ಕಾಶ್ಮೀರಕ್ಕೆ ಸಂಬಂಧಿಸಿದ ಪ್ರಶ್ನೆಗಳನ್ನು ಕೇಳಿ ಎಂದು ಹೇಳಿದರು