ಪಿಎಸ್ ಐ ನೇಮಕಾತಿ ಅಕ್ರಮದಲ್ಲಿ ಯಾವುದೇ ಅಭ್ಯರ್ಥಿಗೆ ನಾನು ಶಿಫಾರಸು ಮಾಡಿಲ್ಲ. ನೆರವು ನೀಡಿಲ್ಲ. ನಾನು ಯಾವುದೇ ತಪ್ಪು ಮಾಡಿಲ್ಲ. ತಪ್ಪು ಮಾಡಿದವರಿಗೆ ಶಿಕ್ಷೆ ಆಗಲೇಬೇಕು ಎಂದು ಐಟಿ ಬಿಟಿ ಸಚಿವ ಅಶ್ವಥ್ ನಾರಾಯಣ್ ಆಗ್ರಹಿಸಿದ್ದಾರೆ.
ಪಿಎಸ್ ಐ ನೇಮಕಾತಿಯಲ್ಲಿ ಸಚಿವರ ಪುತ್ರರೊಬ್ಬರು ಭಾಗಿಯಾಗಿದ್ದಾರೆ. ಅವರಿಗೆ ಯಾಕೆ ನೋಟಿಸ್ ನೀಡಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಸೋಮವಾರ ತುರ್ತು ಪತ್ರಿಕಾಗೋಷ್ಠಿಯಲ್ಲಿ ಅವರು ಸ್ಪಷ್ಟನೆ ನೀಡಿದರು.
ನಾನು ಯಾವುದೇ ತಪ್ಪು ಮಾಡಿಲ್ಲ. ರಾಜಕೀಯದಲ್ಲಿ ಒಳ್ಳೆಯವುದೇ ಸವಾಲು. ಭ್ರಷ್ಟಾಚಾರ ಮಾಡಲು ನಾನು ರಾಜಕೀಯಕ್ಕೆ ಬಂದಿಲ್ಲ. ಭ್ರಷ್ಟಾಚಾರ ಮಾಡಿದವರಿಗೆ ಇದೇ ಬದುಕು. ಇದೇ ಜೀವನ. ಅದಕ್ಕಾಗಿ ಈ ಆರೋಪಗಳು ಮಾಡುತ್ತಿದ್ದರೆ. ಆದರೆ ಅದರಲ್ಲಿ ಸ್ಪಷ್ಟವಾಗಿ ಹೇಳಿಲ್ಲ ಎಂದು ಅವರು ಹೇಳಿದರು.
ಸಿಐಡಿ ತನಿಖೆ ನಡೆಸುತ್ತಿದೆ. ಪ್ರಾಮಾಣಿಕವಾಗಿ ತನಿಖೆ ನಡೆಸಿ ತಪ್ಪಿತಸ್ಥರನ್ನು ಪತ್ತೆ ಹಚ್ಚಲಿ. ತಪ್ಪು ಮಾಡಿದವರಿಗೆ ಶಿಕ್ಷೆ ಆಗಲೇಬೇಕು. ಉಪ್ಪು ತಿಂದವರು ನೀರು ಕುಡಿಯಲೇಬೇಕು. ಕಾಂಗ್ರೆಸ್ ನವರು ಸುಳ್ಳು ಆರೋಪ ಮಾಡಿದ್ದರ ಹಿಂದೆ ಷಡ್ಯಂತ್ರ ಇದೆ. ಡಿಕೆ ಶಿ ವಿರುದ್ದ ನಾಳೆಯಿಂದ ಎಲ್ಲಾ ಬಂಡವಾಳ ಹೊರಗೆ ಹಾಕ್ತೀನಿ ಎಂದು ಅಶ್ವಥ್ ನಾರಾಯಣ್ ಹೇಳಿದರು.