ಇನ್ಮುಂದೆ ಸಂಗೊಳ್ಳಿ ರಾಯಣ್ಣ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಯೂ-ಟರ್ನ್ ಹೊಡೆದಿದ್ದಾರೆ.
ಯಾವುದೇ ಕಾರಣಕ್ಕೂ ಬ್ರಿಗೇಡ್‌ನಿಂದ ದೂರವಾಗುವ ಪ್ರಶ್ನೆಯೇ ಇಲ್ಲ ಎಂದು ಘೋಷಿಸಿದ್ದ ಈಶ್ವರಪ್ಪ ಕೊನೆಗೂ ಹೈಕಮಾಂಡ್ ನಿರ್ದೇಶನಕ್ಕೆ ಮಣಿದಿದ್ದಾರೆ.
ಬ್ರಿಗೇಡ್‌ನಿಂದ ಪಕ್ಷದ ಕಾರ್ಯಕರ್ತರಲ್ಲಿ ಗೊಂದಲವಾಗುತ್ತಿದೆ. ಆದ್ದರಿಂದ, ಬಿಜೆಪಿ ಪಕ್ಷದ ಹೈಕಮಾಂಡ್ ನಾಯಕರ ಸೂಚನೆಯನ್ನು ಪಾಲಿಸುತ್ತೇನೆ ಎಂದಿದ್ದಾರೆ.
ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ನ ದಲಿತ, ಹಿಂದುಳಿದ ಮುಖಂಡರಿಗೆ ಬಿಜೆಪಿಯಲ್ಲಿ ಸ್ಥಾನ ನೀಡುವುದಾಗಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಒಪ್ಪಿಗೆ ನೀಡಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ನನಗೆ ಒಬಿಸಿ ರಾಜ್ಯ ಉಸ್ತುವಾರಿಯನ್ನು ವಹಿಸಿದ್ದು ಅದರಂತೆ ಕಾರ್ಯನಿರ್ವಹಿಸುತ್ತಿದ್ದೇನೆ. ರಾಷ್ಟ್ರಾಧ್ಯಕ್ಷರ ಆದೇಶದಂತೆ ಬ್ರಿಗೇಡ್ ಪದಾಧಿಕಾರಿಗಳಿಗೆ ಬಿಜೆಪಿಯಲ್ಲಿ ಹುದ್ದೆ ದೊರೆಯಲಿದೆ ಎಂದು
ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.