Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಪಕ್ಷ ಬಿಡುವುದಿಲ್ಲ, ಏತಕ್ಕಾಗಿ ಬಿಡಬೇಕು: ಅಂಬರೀಷ್

ಕಾಂಗ್ರೆಸ್ ಪಕ್ಷ ಬಿಡುವುದಿಲ್ಲ, ಏತಕ್ಕಾಗಿ ಬಿಡಬೇಕು: ಅಂಬರೀಷ್
ಬೆಂಗಳೂರು , ಶುಕ್ರವಾರ, 14 ಏಪ್ರಿಲ್ 2017 (15:43 IST)
ಕಾಂಗ್ರೆಸ್ ಪಕ್ಷವನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ಏತಕ್ಕಾಗಿ ಬಿಡಬೇಕು ಎಂದು ಹಿರಿಯ ನಟ ಮಾಜಿ ಸಚಿವ ಅಂಬರೀಷ್ ತಿರುಗೇಟು ನೀಡಿದ್ದಾರೆ.
 
ಕಾಂಗ್ರೆಸ್ ಪಕ್ಷ, ಕೇಂದ್ರ ಸಚಿವ ಸ್ಥಾನ, ರಾಜ್ಯ ಸಚಿವ ಸ್ಥಾನ, ಶಾಸಕ ಸ್ಥಾನದಂತಹ ಹುದ್ದೆಗಳನ್ನು ನೀಡಿದೆ. ನಾನು ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಯಲ್ಲವಾದ್ದರಿಂದ ಕಾಂಗ್ರೆಸ್ ತ್ಯಜಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದರು.
 
ನಂಜನಗೂಡು, ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಿರುವುದು ಸಂತಸದ ಸಂಗತಿ. ಕಾಂಗ್ರೆಸ್ ಸರಕಾರದ ಅವಧಿ ಮುಕ್ತಾಯಕ್ಕೆ ಒಂದು ವರ್ಷವಿರುವುದರಿಂದ ಅಭಿವೃದ್ಧಿಯಾಗುತ್ತದೆ ಎನ್ನುವ ವಿಶ್ವಾಸದಿಂದ ಜನತೆ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿದ್ದಾರೆ ಎಂದರು.
 
ಸಚಿವ ಸಂಪುಟದಿಂದ ಕೈಬಿಟ್ಟಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಮೇಲೆ ನನಗೆ ಅಸಮಾಧಾನವಿಲ್ಲ. ಸಚಿವ ಸ್ಥಾನ ನೀಡುವುದು ಬಿಡುವುದು ಅವರ ವಿವೇಚನೆಗೆ ಬಿಟ್ಟಿದ್ದು ಎಂದು ಮಾಜಿ ಸಚಿವ ಅಂಬರೀಷ್ ತಿಳಿಸಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಕೋರ್ಟ್ ಆದೇಶದಂತೆ ಬಾಂಬ್‌ನಾಗ ನಿವಾಸದ ಮೇಲೆ ದಾಳಿ: ನಿಂಬಾಳ್ಕರ್