Select Your Language

Notifications

webdunia
webdunia
webdunia
webdunia

ನಾನು ಯಾವುದೇ ಕಾರಣಕ್ಕೂ ಮಂತ್ರಿ ಸ್ಥಾನ ತ್ಯಾಗ ಮಾಡಲ್ಲ: ಪರಮೇಶ್ವರ್

ಪರಮೇಶ್ವರ್
ಬೆಂಗಳೂರು : ಯಾವುದೇ ಕಾರಣಕ್ಕೂ ನಾನು ಎರಡೂವರೆ ವರ್ಷದ ಬಳಿಕ ಸಚಿವ ಸ್ಥಾನ ಬಿಟ್ಟುಕೊಡುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವೇಳೆ ಎರಡೂವರೆ ವರ್ಷ ಆದ ಮೇಲೆ ಹಿರಿಯ ಸಚಿವರು ಸಚಿವ ಸ್ಥಾನ ತ್ಯಾಗ ಮಾಡಬೇಕು ಎಂಬ ಸಚಿವ ಮುನಿಯಪ್ಪ ಹೇಳಿಕೆಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಮುನಿಯಪ್ಪ ಅವರ ಹೇಳಿಕೆಗೆ ನನ್ನ ಸಹಮತ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಸಚಿವ ಮುನಿಯಪ್ಪ ಅವರ ಮಾತಿಗೆ ನನ್ನ ಒಪ್ಪಿಗೆ ಇಲ್ಲ. ನಾನು ಯಾಕೆ ಎರಡೂವರೆ ವರ್ಷ ಆದ ಮೇಲೆ ಸಚಿವ ಸ್ಥಾನ ತ್ಯಾಗ ಮಾಡಲಿ? ಅವರ ವೈಯಕ್ತಿಕ ಅಭಿಪ್ರಾಯದಲ್ಲಿ ತ್ಯಾಗದ ಬಗ್ಗೆ ಹೇಳಿರಬಹುದು. ಆ ವಿಚಾರದಲ್ಲಿ ತಪ್ಪೇನು ಇಲ್ಲ. ಅವರು ಹೇಳಿದರೆ, ಅವರು ಸ್ಥಾನ ಬಿಟ್ಟು ಕೊಡುತ್ತಾರೆ. ನಾನು ಯಾಕೆ ಸಚಿವ ಸ್ಥಾನ ಬಿಟ್ಟು ಕೊಡಲಿ. ನಾನು ಸ್ಥಾನ ಬಿಟ್ಟು ಕೊಡುವ ಬಗ್ಗೆ ಮಾತನಾಡಿಲ್ಲ ಎಂದು ಹೇಳಿದ್ದಾರೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರಿಗೆ 40% ಮಳೆ ಕೊರತೆ