ಬೆಂಗಳೂರು: ಕಾಂಗ್ರೆಸ್ ನಾಯಕರ ಮಾತಿಗೆ ವೆಂಬರ್ 23ರ ಉಪಚುನಾವಣೆ ಫಲಿತಾಂಶದ ನಂತರ ಉತ್ತರ ಕೊಡುತ್ತೇನೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತಿರುಗೇಟು ನೀಡಿದರು.
ದೇವೇಗೌಡ, ಕುಮಾರಸ್ವಾಮಿ, ಬಿಜೆಪಿ ನಾಯಕರ ಬಗ್ಗೆ ಕಾಂಗ್ರೆಸ್ ನಾಯಕರು ಮಾತನಾಡುತ್ತಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಚನ್ನಪಟ್ಟಣ ಉಪಚುನಾವಣೆ ಬೇರೆ ಕ್ಷೇತ್ರಗಳಿಗಿಂತ ಗಮನ ಸೆಳೆದಿದೆ. ಕಾಂಗ್ರೆಸ್ ನಾಯಕರು ಏನೇನು ಮಾತನಾಡುತ್ತಿದ್ದಾರೆ ಎಂದು ಗಮನಿಸುತ್ತಿದ್ದೇನೆ ಎಂದಿದ್ದಾರೆ.
ಕಾಂಗ್ರೆಸ್ ನಾಯಕರು ಮಾಡಿರುವ ಎಲ್ಲಾ ಆರೋಪಗಳನ್ನು ನೋಟ್ ಮಾಡಿ ಇಟ್ಟುಕೊಂಡಿದ್ದೇನೆ. ನವೆಂಬರ್ 13 ರಂದು ಚುನಾವಣೆ ನಡೆಯುತ್ತದೆ. ನವೆಂಬರ್ 23ರಂದು ಫಲಿತಾಂಶ ಬರಲಿದೆ. ಚುನಾವಣೆ ಫಲಿತಾಂಶ ಬಂದ ಬಳಿಕ ಎಲ್ಲರಿಗೂ ನಾನು ಉತ್ತರ ಕೊಡುತ್ತೇನೆ ಎಂದರು.
ದೇವೇಗೌಡರ ಆರೋಗ್ಯದ ಬಗ್ಗೆಯಿಂದ ಹಿಡಿದು, ನಮ್ಮ ಪಕ್ಷದ ನಿರ್ಧಾರಗಳ ಬಗ್ಗೆ ಮಾತಾಡಿದ್ದಾರೆ. ನಮ್ಮ ಸಮಾಜದ ಹಲವಾರು ನಾಯಕರ ಬಗ್ಗೆ ಮಾತಾಡಿದ್ದಾರೆ. ನಮ್ಮಿಂದ ಅನನುಕೂಲಗಳು ಆಗಿವೆ. ಅವರ ಬೆಳವಣಿಗೆಗೆ ತೊಂದರೆ ಅಗಿದೆ ಅಂತ ಹೇಳಿದ್ದಾರೆ. ಕುಮಾರಸ್ವಾಮಿ ಒಬ್ಬರೇ ಒಕ್ಕಲಿಗರಾ? ನಾವೇನು ಒಕ್ಕಲಿಗರು ಅಲ್ಲವಾ ಅಂತ ಮಾತಾಡಿದ್ದಾರೆ. ಎಲ್ಲವನ್ನೂ ನೋಟ್ ಮಾಡಿಕೊಂಡಿದ್ದೇನೆ ಎಂದು ಹೇಳಿದರು.