ಕಾಂಗ್ರೆಸ್‌ನವರ ಟೀಕೆಗೆ ನ.23ರಂದು ಉತ್ತರ ಕೊಡುತ್ತೇನೆ: ಕುಮಾರಸ್ವಾಮಿ ತಿರುಗೇಟು

Sampriya
ಮಂಗಳವಾರ, 29 ಅಕ್ಟೋಬರ್ 2024 (15:52 IST)
ಬೆಂಗಳೂರು: ಕಾಂಗ್ರೆಸ್ ನಾಯಕರ ಮಾತಿಗೆ ವೆಂಬರ್ 23ರ ಉಪಚುನಾವಣೆ ಫಲಿತಾಂಶದ ನಂತರ ಉತ್ತರ ಕೊಡುತ್ತೇನೆ ಎಂದು ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ತಿರುಗೇಟು ನೀಡಿದರು.

ದೇವೇಗೌಡ, ಕುಮಾರಸ್ವಾಮಿ, ಬಿಜೆಪಿ ನಾಯಕರ ಬಗ್ಗೆ ಕಾಂಗ್ರೆಸ್ ನಾಯಕರು ಮಾತನಾಡುತ್ತಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಚನ್ನಪಟ್ಟಣ ಉಪಚುನಾವಣೆ ಬೇರೆ ಕ್ಷೇತ್ರಗಳಿಗಿಂತ ಗಮನ ಸೆಳೆದಿದೆ. ಕಾಂಗ್ರೆಸ್ ನಾಯಕರು ಏನೇನು ಮಾತನಾಡುತ್ತಿದ್ದಾರೆ ಎಂದು ಗಮನಿಸುತ್ತಿದ್ದೇನೆ ಎಂದಿದ್ದಾರೆ.

ಕಾಂಗ್ರೆಸ್ ನಾಯಕರು ಮಾಡಿರುವ ಎಲ್ಲಾ ಆರೋಪಗಳನ್ನು ನೋಟ್ ಮಾಡಿ ಇಟ್ಟುಕೊಂಡಿದ್ದೇನೆ. ನವೆಂಬರ್ 13 ರಂದು ಚುನಾವಣೆ ನಡೆಯುತ್ತದೆ. ನವೆಂಬರ್ 23ರಂದು ಫಲಿತಾಂಶ ಬರಲಿದೆ. ಚುನಾವಣೆ ಫಲಿತಾಂಶ ಬಂದ ಬಳಿಕ ಎಲ್ಲರಿಗೂ ನಾನು ಉತ್ತರ ಕೊಡುತ್ತೇನೆ ಎಂದರು.

ದೇವೇಗೌಡರ ಆರೋಗ್ಯದ ಬಗ್ಗೆಯಿಂದ ಹಿಡಿದು, ನಮ್ಮ ಪಕ್ಷದ ನಿರ್ಧಾರಗಳ ಬಗ್ಗೆ ಮಾತಾಡಿದ್ದಾರೆ. ನಮ್ಮ ಸಮಾಜದ ಹಲವಾರು ನಾಯಕರ ಬಗ್ಗೆ ಮಾತಾಡಿದ್ದಾರೆ. ನಮ್ಮಿಂದ ಅನನುಕೂಲಗಳು ಆಗಿವೆ. ಅವರ ಬೆಳವಣಿಗೆಗೆ ತೊಂದರೆ ಅಗಿದೆ ಅಂತ ಹೇಳಿದ್ದಾರೆ. ಕುಮಾರಸ್ವಾಮಿ ಒಬ್ಬರೇ ಒಕ್ಕಲಿಗರಾ? ನಾವೇನು ಒಕ್ಕಲಿಗರು ಅಲ್ಲವಾ ಅಂತ ಮಾತಾಡಿದ್ದಾರೆ. ಎಲ್ಲವನ್ನೂ ನೋಟ್ ಮಾಡಿಕೊಂಡಿದ್ದೇನೆ ಎಂದು ಹೇಳಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯನವರಿಗೆ ಪುತ್ರನಿಂದಲೇ ಎದುರಾಯ್ತಾ ಸಂಕಷ್ಟ

Karnataka Weather: ಇಂದು ಚಳಿ ಎಷ್ಟಿರಲಿದೆ ಗೊತ್ತಾ

ಮಂಗಳೂರು: ಇನ್ನೇನೂ ಮದುವೆಗೆ ಎರಡು ದಿನವಿರುವಾಗ ನಾಪತ್ತೆಯಾದ ಹುಡುಗು, ಕೊನೆಗೂ ಪತ್ತೆ

ಅಕ್ರಮವಾಗಿ ಭಾರತಕ್ಕೆ ಬಂದಿದ್ದ 10 ಬಾಂಗ್ಲಾದೇಶಿ ಪ್ರಜೆಗಳಿಗೆ 2 ವರ್ಷ ಜೈಲು

ಬಿಜೆಪಿ ಚುನಾವಣಾ ಆಯೋಗವನ್ನು ಬಳಸಿಕೊಂಡು, ನಿರ್ದೇಶಿಸುತ್ತಿದೆ: ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments