ಕುರಿತಂತೆ ಬಿಜೆಪಿಯ ಜಾತಿವಾದಿ ಸಿದ್ಧರಾಮಯ್ಯ ಮಾತಿಗೆ ಟ್ವಿಟ್ಟರ್ ನಲ್ಲಿ ಖಡಕ್ ತಿರುಗೇಟು ನೀಡಿರುವಂತ ಅವರು, 'ಬಾಯಲ್ಲಿ ನಾವೆಲ್ಲ ಒಂದು, ನಾವೆಲ್ಲ ಹಿಂದು' ಎನ್ನುವ ಮಂತ್ರ. ಅಂತರಂಗದಲ್ಲಿ ಜಾತಿಗಳನ್ನು ಒಡೆದು ಆಳುವ ಕುತಂತ್ರ. ಮಂಡಲ ವಿರುದ್ದ ಕಮಂಡಲ ಹಿಡಿದ ಬಿಜೆಪಿ ನಾಯಕರ ಜಾತಿ ಹಿಪಾಕ್ರಸಿಯನ್ನು ಬಿಚ್ಚಿಟ್ಟರೆ ಅದೊಂದು ಕೊನೆಯಿಲ್ಲದ ಧಾರವಾಹಿ ಆದೀತು ಎಂದಿದ್ದಾರೆ.
ಮುಖ್ಯಮಂತ್ರಿ ಕುರ್ಚಿ ಉಳಿಸಿಕೊಳ್ಳಲು ಲಿಂಗಾಯತ ಸ್ವಾಮಿಗಳನ್ನು ಮನೆಗೆ ಕರೆಸಿ ದುಡ್ಡು ಹಂಚಿದ್ದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಜಾತಿವಾದಿಯೇ? ಜಾತ್ಯತೀತವಾದಿಯೇ? ಎಂದು ಪ್ರಶ್ನಿಸಿದ್ದಾರೆ.
ಕುರುಬ ಸಮಾವೇಶ ನಡೆಸಿದ್ದ ಈಶ್ವರಪ್ಪ(), ಪಂಚಮಸಾಲಿ ಲಿಂಗಾಯತರ ಸಮಾವೇಶ ನಡೆಸಿದ ಯತ್ನಾಳ್, ಬ್ರಾಹ್ಮಣ ಸಮಾವೇಶದಲ್ಲಿ ಪಾಲ್ಗೊಂಡ ಜೋಷಿ, ಕಾಗೇರಿ, ಸುರೇಶ್ ಕುಮಾರ್, ಒಕ್ಕಲಿಗನೆಂಬ ಕಾರಣಕ್ಕೆ ಸಚಿವನಾದೆ ಎನ್ನುವ ಆರ್.ಅಶೋಕ್ ಜಾತಿವಾದಿಗಳಾ? ಜಾತ್ಯತೀತರಾ? ಎಂದು ಪ್ರಶ್ನಿಸೋ ಮೂಲಕ ಖಡಕ್ ಟಾಂಕ್ ನೀಡಿದ್ದಾರೆ.