Webdunia - Bharat's app for daily news and videos

Install App

ಉಪಚುನಾವಣೆಯಲ್ಲಿ ಗೆದ್ದು ನನ್ನ ಶಕ್ತಿ ಏನೆಂಬುದನ್ನು ತೋರಿಸುತ್ತೇನೆ: ಸಿಎಂಗೆ ಪ್ರಸಾದ್ ಸವಾಲ್

Webdunia
ಗುರುವಾರ, 29 ಡಿಸೆಂಬರ್ 2016 (14:08 IST)
ನಂಜನಗೂಡು ಉಪಚುನಾವಣೆಯಲ್ಲಿ ಗೆದ್ದು ನನ್ನ ಶಕ್ತಿ ಏನೆಂಬುದನ್ನು ತೋರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಸವಾಲ್ ಎಸೆದಿದ್ದಾರೆ.
ಮೈಸೂರಿನಲ್ಲಿ ಕಾರ್ಯಕರ್ತರು ಹಾಗೂ ಅಭಿಮಾನಿಗಳ ಜೊತೆ ಸಭೆ ನಡೆಸಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಾನು ಸಚಿವನಾಗಿದ್ದಾಗ ನಂಜನಗೂಡು ಕ್ಷೇತ್ರಕ್ಕೆ ಮಂಜೂರಾಗಿದ್ದ ಕಾಮಗಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಸಚಿವ ಸಂಪುಟದ ಸಚಿವರು ಇಂದು ಗುದ್ದಲಿ ಪೂಜೆ ನಡೆಸುತ್ತಿದ್ದಾರೆ. ಇದು ಚುನಾವಣೆ ಗಿಮಿಕ್ ಎಂದು ಕಿಡಿ ಕಾರಿದರು. 
 
ಹಣಬಲದಿಂದ ಮೆರೆಯುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬುದ್ಧಿಕಲಿಸಲು ಬಿಜೆಪಿಗೆ ಸೇರ್ಪಡೆಗೊಂಡು ಉಪಚುನಾವಣೆಯಲ್ಲಿ ತಕ್ಕ ಪಾಠ ಕಲಿಸುತ್ತೇನೆ ಎಂದರು. 
 
ಜನವರಿ 2ರಂದು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡು ಕೇಂದ್ರ ಸಚಿವರು ಮತ್ತು ರಾಜ್ಯದ ಮುಖಂಡರೊಂದಿಗೆ ನಂಜನಗೂಡಿನಲ್ಲಿ ಭಾರಿ ಬಹಿರಂಗ ಸಭೆ ನಡೆಸಿ ನಮ್ಮ ಶಕ್ತಿ ಪ್ರದರ್ಶಿಸುತ್ತೇವೆ ಎಂದು ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ತಿಳಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments