Webdunia - Bharat's app for daily news and videos

Install App

'ಕೈ' ಬಿಟ್ಟು 'ತೆನೆ' ಹೊರುವುದಿಲ್ಲ: ಸತೀಶ್ ಜಾರಕಿಹೊಳಿ

Webdunia
ಸೋಮವಾರ, 7 ನವೆಂಬರ್ 2016 (16:56 IST)
ನಾನು 'ಕೈ' ಬಿಟ್ಟು 'ತೆನೆ' ಹೊರುವುದಿಲ್ಲ. ನಾನು ಕಾಂಗ್ರೆಸ್‌ನಲ್ಲಿ ಇದ್ದೆ, ಮುಂದೆಯೂ ಇರುತ್ತೇನೆ ಎನ್ನುವುದರ ಮೂಲಕ ಶಾಸಕ, ಮಾಜಿ ಸಚಿವ ಸತೀಶ್ ಜಾರಕಿಹೊಳಿ ತಾವು ಜೆಡಿಎಸ್ ಸೇರುತ್ತೇನೆ ಎಂದು ಹಬ್ಬಿರುವ ವದಂತಿಗಳನ್ನು ತಳ್ಳಿ ಹಾಕಿದ್ದಾರೆ.
 
ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿಯಾಗಿ ಮಾತನಾಡಿದ್ದೇನೆ ಎಂಬ ಸುದ್ದಿ ಸುಳ್ಳು. ಅವರೇ ಒಂದು ಬಾರಿ ಫೋನ್ ಕರೆ ಮಾತನಾಡಿದ್ದರು. ಆದರೆ ನಾನು ಅವರ ಪಾಳಯಕ್ಕೆ ಸೇರುವ ಬಗ್ಗೆ ಮಾತುಕತೆ ನಡೆದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
 
ಶ್ರೀನಿವಾಸ್ ಪ್ರಸಾದ್ ಅವರ ರಾಜೀನಾಮೆಯಿಂದ ತೆರವಾಗಿರುವ ನಂಜನಗೂಡು ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಪ್ರಚಾರಕ್ಕೂ ಹೋಗುತ್ತೇನೆ ಎಂದವರು ಹೇಳಿದ್ದಾರೆ. 
 
ನಮ್ಮ ಸರ್ಕಾರದಲ್ಲಿ ಕೆಲವೆಡೆ ಅಸಮತೋಲನವಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಎಲ್ಲವನ್ನು ತೂಗಿಸಿಕೊಂಡು ಹೋಗುತ್ತಾರೆ ಎಂಬ ವಿಶ್ವಾಸವನ್ನವರು ವ್ಯಕ್ತಪಡಿಸಿದ್ದಾರೆ.
 
ಟಿಪ್ಪು ಜಯಂತಿ ಆಚರಣೆ ಕೈ ಬಿಡುವುದಿಲ್ಲ, ಟಿಪ್ಪು ಜಯಂತಿ ಆಚರಣೆಯಿಂದ ಕೋಮು-ಗಲಭೆ ಸೃಷ್ಟಿಯಾಗಿದೆ ಎಂಬ ಆರೋಪಗಳು ಸುಳ್ಳು ಎಂದಿದ್ದಾರೆ ಜಾರಕಿಹೊಳಿ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್‍ಸಿ ಜನಗಣತಿಯಲ್ಲಿ ಶೇ 50ಕ್ಕಿಂತ ಹೆಚ್ಚು ಜನರು ಭಾಗವಹಿಸಲಾಗದು: ಛಲವಾದಿ ನಾರಾಯಣಸ್ವಾಮಿ

ಮುಖ್ಯಮಂತ್ರಿಗಳು ಅವಮಾನ ಮಾಡಿದಾಗ ಐಎಎಸ್ ಸಂಘದವರು ಎಲ್ಲಿ ಹೋಗಿದ್ರು: ಬಿವೈ ವಿಜಯೇಂದ್ರ

ಅಂಗಡಿಯಲ್ಲಿ ಚಿಪ್ಸ್ ಮುಗಿದಿದೆಂದು ಗೋಡೌನ್‌ಗೆ ಕರೆದುಕೊಂಡು ಹೋಗಿ ಬಾಲಕಿಗೆ ಲೈಂಗಿಕ ದೌರ್ಜನ್ಯ

ನಾಡದೇವತೆಗೆ ಕುಟುಂಬ ಸಮೇತ ವಿಶೇಷ ಪೂಜೆ ಸಲ್ಲಿಸಿದ ಡಿಕೆ ಶಿವಕುಮಾರ್‌

ಅಕ್ರಮ ಸಂಬಂಧ ಶಂಕೆ: ವ್ಯಕ್ತಿ ಜತೆ ಪತ್ನಿ ಮಾತನಾಡುತ್ತಿರುವಾಗಲೇ ಎಂಟ್ರಿ ಕೊಟ್ಟ ಪತಿ, ಆಗಿದ್ದೆ ಬೇರೆ

ಮುಂದಿನ ಸುದ್ದಿ
Show comments