ಮಾಜಿ ಸಿಎಂ ಎಸ್.ಎಂ.ಕೃಷ್ಣ ನನ್ನ ಪ್ರಚಾರಕ್ಕೆ ಬಂದಿರುವುದು ಸಂತಸ ತಂದಿದೆ ಎಂದು ನಂಜನಗೂಡು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ.
ನಂಜನಗೂಡಿನಲ್ಲಿ ಚುನಾವಣೆ ಪ್ರಚಾರದಲ್ಲಿ ಮಾತನಾಡಿದ ಅವರು, ಕೃಷ್ಣ ಅವರ ವ್ಯಕ್ತಿತ್ವದಿಂದ ಬಿಜೆಪಿಗೆ ಬರುವ ಮತಗಳ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಬಿಜೆಪಿ ಸೇರ್ಪಡೆಯಿಂದಾಗಿ ಪಕ್ಷಕ್ಕೆ ಮತ್ತಷ್ಟು ಬಲ ಬಂದಂತಾಗಿದೆ ಎಂದು ತಿಳಿಸಿದ್ದಾರೆ.
ಕಳೆದ 40 ವರ್ಷಗಳಿಂದ ಕ್ಷೇತ್ರದ ಜನತೆ ನನ್ನ ಜೊತೆಗಿದ್ದಾರೆ. ಚುನಾವಣೆಯಲ್ಲಿ ಗೆಲ್ಲುಸುತ್ತಾರೆ ಎನ್ನುವ ವಿಶ್ವಾಸವಿದೆ. ಸಿಎಂ ಸಿದ್ದರಾಮಯ್ಯಗೆ ತಕ್ಕ ಪಾಠ ಕಲಿಸಬೇಕಾಗಿದೆ ಎಂದು ಗುಡುಗಿದ್ದಾರೆ.
ಕಾಂಗ್ರೆಸ್ ಸರಕಾರದ ದುರಾಡಳಿತದಿಂದ ಜನತೆ ಬೇಸತ್ತು ಹೋಗಿದ್ದಾರೆ. ಬಿಜೆಪಿ ಪಕ್ಷ ಯಾವಾಗ ಅಧಿಕಾರಕ್ಕೆ ಬರುತ್ತದೆಯೋ ಎಂದು ನಿರೀಕ್ಷಿಸುತ್ತಿದ್ದಾರೆ. ಮೋದಿ ಪ್ರಭಾವ ಚುನಾವಣೆ ಮೇಲೆ ಬೀರಲಿದೆ ಎಂದು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ಪ್ರಸಾದ್ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.