ರಾಜಕೀಯ ಗಿಮಿಕ್‌ಗಾಗಿ ಉತ್ತರ ಕರ್ನಾಟಕಕ್ಕೆ ಬಂದಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಅಬಕಾರಿ ಸಚಿವ ಎಚ್.ವೈ.ಮೇಟಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಮುಖ್ಯಮಂತ್ರಿಯಾಗಿದ್ದಾಗ ಉತ್ತರ ಕರ್ನಾಟಕದಲ್ಲಿ ಅಭಿವೃದ್ಧಿ ಕಾರ್ಯ ಮಾಡಿದ್ದೇನೆ. ಹೀಗಾಗಿ ಉತ್ತರ ಕರ್ನಾಟಕದಲ್ಲಿ ಮತಭಿಕ್ಷೆಗೆ ಬರುತ್ತಿದ್ದೇನೆ. ಮುಂಬರವ ಚುನಾವಣೆಯಲ್ಲಿ ಎಂದರು.
ರಾಷ್ಟ್ರೀಯ ಪಕ್ಷಗಳು ಉತ್ತರ ಕರ್ನಾಟಕ ಅಭಿವೃದ್ಧಿಯನ್ನು ನಿರ್ಲಕ್ಷಿಸಿವೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಉತ್ತರ ಕರ್ನಾಟಕದಿಂದಲೇ ಸ್ಪರ್ಧಿಸಬೇಕು ಎನ್ನುವ ಒತ್ತಾಯವಿದೆ. ಆದರೆ, ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎನ್ನುವುದನ್ನು ಇನ್ನೂ ನಿರ್ಧರಿಸಿಲ್ಲ ಎಂದು ಸ್ಪಷ್ಟಪಡಿಸಿದರು.
ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಅತೃಪ್ತ ನಾಯಕರು ಜೆಡಿಎಸ್ ಪಕ್ಷ ಸೇರಲಿದ್ದಾರೆ. ಸಮಯ ಬಂದಾಗ ಅವರ ಹೆಸರುಗಳನ್ನು ಬಹಿರಂಗಪಡಿಸುತ್ತೇನೆ. ಹಾಗೂ ಜೆಡಿಎಸ್ ಪಕ್ಷ ಸೇರಲಿರುವ ಅತೃಪ್ತ ನಾಯಕರ ಸ್ಥಾನಮಾನ ನೋಡಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ