ನಾನು ಜೆಡಿಎಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಎಂದು ಜೆಡಿಎಸ್ ಬಂಡಾಯ ಶಾಸಕ ಗೋಪಾಲಯ್ಯ ಯೂಟರ್ನ್ ಹೊಡೆದಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನತಾದಳದ ಕಾಲದಿಂದಲೂ ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿದ್ದೇನೆ. ಅಂದು ನಾನು ಪಕ್ಷದ ವಿರುದ್ಧ ಹೋಗಬಾರದಿತ್ತು. ಅದಕ್ಕಾಗಿ ಸಾಕಷ್ಟು ಪಶ್ಚಾತಾಪಪಟ್ಟಿದ್ದೇನೆ ಎಂದು ಬೇಸರ ವ್ಯಕ್ತಪಡಿಸಿದರು.
ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ನೇತೃತ್ವದಲ್ಲಿ ಪಕ್ಷ ಬಲವರ್ಧನೆಗೆ ಮುಂದಾಗುತ್ತೇನೆ ಎಂದು ಬಂಡಾಯ ಶಾಸಕ ಗೋಪಾಲಯ್ಯ ಭರವಸೆ ನೀಡಿದ್ದಾರೆ.
ಈ ಹಿಂದೆ, ಶಾಸಕ ಗೋಪಾಲಯ್ಯ ಸೇರಿದಂತೆ ಜಮೀರ್ ಅಹ್ಮದ್, ಇಕ್ಬಾಲ್ ಅನ್ಸಾರಿ, ಬಂಡಿಸಿದ್ದೇಗೌಡ, ಚೆಲುವರಾಯ ಸ್ವಾಮಿ, ಅಖಂಡ ಶ್ರೀನಿವಾಸ್ ಮೂರ್ತಿ,ಭೀಮಾನಾಯ್ಕ, ಎಚ್.ಸಿ ಬಾಲಕೃಷ್ಣ ಜೆಡಿಎಸ್ ಪಕ್ಷದ ವಿರುದ್ಧ ಬಂಡಾಯ ಎದ್ದಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ