Select Your Language

Notifications

webdunia
webdunia
webdunia
webdunia

ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ: ಸಚಿವ ಪಾಟೀಲ್

ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ: ಸಚಿವ ಪಾಟೀಲ್
ವಿಜಯಪುರ , ಸೋಮವಾರ, 17 ಏಪ್ರಿಲ್ 2017 (14:06 IST)
ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ. ಉತ್ತರ ಕರ್ನಾಟಕ ಭಾಗದ ನಾಯಕರು ಕೆಪಿಸಿಸಿ ಅಧ್ಯಕ್ಷರಾದರೆ ಸೂಕ್ತ ಎಂದು ಜಲಸಂಪನ್ಮೂಲ ಖಾತೆ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
 
ಕೆಪಿಸಿಸಿ ಅಧ್ಯಕ್ಷರನ್ನಾಗಿ ಜಿ.ಪರಮೇಶ್ವರ್‌ ಅವರನ್ನು ಮುಂದುವರಿಸುವುದಾದರೆ ಸ್ವಾಗತ. ಪಕ್ಷ ಹೈಕಮಾಂಡ್ ಯಾವ ತೀರ್ಮಾನ ತೆಗೆದುಕೊಂಡರೂ ನಾವೆಲ್ಲ ಬದ್ಧರಾಗಿರುತ್ತೇವೆ ಎಂದು ತಿಳಿಸಿದ್ದಾರೆ.
 
ಇಂಧನ ಖಾತೆ ಸಚಿವ ಡಿ.ಕೆ.ಶಿವುಕುಮಾರ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿದರು ಒಳ್ಳೆಯದು. ನನಗೆ ನೀಡಿದರೂ ಉತ್ತಮವಾಗಿ ನಿಭಾಯಿಸುತ್ತೇನೆ ಎಂದು ತಿಳಿಸಿದ್ದಾರೆ.
 
ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಮುಂದಿನ ವಿಧಾನಸಭೆ ಚುನಾವಣೆಯವರೆಗೆ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯುವ ಬಗ್ಗೆ ಪರೋಕ್ಷವಾಗಿ ಇಚ್ಚೆ ವ್ಯಕ್ತಪಡಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಹುದ್ದೆ ಇದೀಗ ಹೈಕಮಾಂಡ್ ಅಂಗಳದಲ್ಲಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

150 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸುವುದು ಖಚಿತ: ಯಡಿಯೂರಪ್ಪ