ಸಂಪುಟ ಪುನಾರಚನೆಯಲ್ಲಿ ಸಚಿವ ಸ್ಥಾನದಿಂದ ಕೈಬಿಡಲಾಗಿದೆ ಎನ್ನುವ ವರದಿಗಳಿಗೆ ಪ್ರತಿಕ್ರಿಯೆ ನೀಡಿದ ಐಟಿ-ಬಿಟಿ ಸಚಿವ ಎಸ್.ಆರ್.ಪಾಟೀಲ್, ಮಂತ್ರಿ ಸ್ಥಾನ ನನ್ನ ಪೂರ್ವಾರ್ಜಿತ ಆಸ್ತಿಯಲ್ಲ. ಕಾಂಗ್ರೆಸ್ ವರಿಷ್ಠರ ನಿರ್ಧಾರಕ್ಕೆ ಎಂದೆಂದಿಗೂ ಬದ್ಧವಾಗಿರುತ್ತೇನೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಮೂರು ವರ್ಷಗಳ ಕಾಲ ಸಚಿವನಾಗಿ ಸೇವೆ ಮಾಡುವ ಜವಾಬ್ದಾರಿ ನೀಡಿತ್ತು. ಅದನ್ನು ಯಶಸ್ವಿಯಾಗಿ ನಿಭಾಯಿಸಿದ್ದೇನೆ. ಇದೀಗ ಶಾಸಕನಾಗಿ ಜನರ ಸೇವೆ ಸಲ್ಲಿಸುತ್ತೇನೆ ಎಂದರು.
ಸಚಿವರಾಗಿದ್ದ ಮೂರು ವರ್ಷದ ಅವಧಿಯಲ್ಲಿ ಯಾವುದೇ ಹಗರಣಗಳಲ್ಲಿ ಅಥವಾ ಯಾರದೋ ವಿರುದ್ಧ ಆರೋಪವಾಗಲಿ ಮಾಡಲು ಹೋಗಿಲ್ಲ. ಹೈಕಮಾಂಡ್ ವಹಿಸಿದ ಕೆಲಸವನ್ನು ನಿಷ್ಠೆಯಿಂದ ಮಾಡಿದ್ದೇನೆ ಎಂದರು.
ವಿಧಾನಸಭೆಯ ಸಭಾಪತಿ ಅಥವಾ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ತಮ್ಮ ಹೆಸರು ಕೇಳಿಬರುತ್ತಿದೆ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್ ಹೈಕಮಾಂಡ್ ಯಾವುದೇ ಕೆಲಸ ವಹಿಸಿದರು ಪ್ರಾಮಾಣಿಕವಾಗಿ ನಿರ್ವಹಿಸಲು ಸಿದ್ದ ಎಂದು ಸಚಿವ ಎಸ್.ಆರ್.ಪಾಟೀಲ್ ತಿಳಿಸಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ
ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ