Select Your Language

Notifications

webdunia
webdunia
webdunia
webdunia

17ರಂದು ಇಬ್ರಾಹಿಂ ಜೆಡಿಎಸ್​​ ಸೇರ್ಪಡೆ

Ibrahim JDS addition on 17th
bangalore , ಗುರುವಾರ, 14 ಏಪ್ರಿಲ್ 2022 (20:27 IST)
ಕೇಂದ್ರದ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಇದೇ 17ರಂದು ಅಧಿಕೃತವಾಗಿ ಜೆಡಿಎಸ್ ಸೇರ್ಪಡೆಯಾಗಲಿದ್ದಾರೆ. ಪಕ್ಷದ ಕೇಂದ್ರ ಕಚೇರಿ ಜೆ.ಪಿ.ಭವನದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಜೆಡಿಎಸ್ ಸೇರಲಿದ್ದಾರೆ. ಪಕ್ಷಕ್ಕೆ ಸೇರ್ಪಡೆಯಾಗುವ ಇಬ್ರಾಹಿಂ ಅವರಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನ ನೀಡಲು ತೀರ್ಮಾನಿಸಲಾಗಿದೆ. ಸೇರ್ಪಡೆಯಾಗುವ ಭಾನುವಾರದಂದೇ ಇಬ್ರಾಹಿಂ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುವ ಸಾಧ್ಯತೆಗಳಿವೆ. ಹಾಲಿ ರಾಜ್ಯಾಧ್ಯಕ್ಷರಾಗಿರುವ ಎಚ್.ಕೆ.ಕುಮಾರಸ್ವಾಮಿ ಅವರಿಗೆ ಪಕ್ಷದ ಸಂಸದೀಯ ಮಂಡಳಿ ಅಧ್ಯಕ್ಷ ಸ್ಥಾನ ನೀಡಲು ಉದ್ದೇಶಿಸಲಾಗಿದೆ. ಹೀಗಾಗಿ ನೂತನ ಪದಾಕಾರಿಗಳ ಅಕಾರ ಸ್ವೀಕಾರವು ಅಂದೇ ನಡೆಯುವ ಸಾಧ್ಯತೆಗಳು ಹೆಚ್ಚಾಗಿವೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ