Webdunia - Bharat's app for daily news and videos

Install App

ಐಸಿಸಿ ಟಿ-20 ರ್ಯಾಂಕಿಂಗ್: 68 ಸ್ಥಾನ ಜಿಗಿದು 7ನೇ ಸ್ಥಾನ ಪಡೆದ ಕಿಶನ್!

Webdunia
ಬುಧವಾರ, 15 ಜೂನ್ 2022 (20:59 IST)
ದಕ್ಷಿಣ ಆಫ್ರಿಕಾ ವಿರುದ್ಧದ ಟಿ-20 ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಆರಂಭಿಕ ಇಶಾನ್ ಕಿಶನ್ ಟಿ-20 ರ್ಯಾಂಕಿಂಗ್ ನಲ್ಲಿ 68 ಸ್ಥಾನ ಜಿಗಿತ ಕಂಡು ಅಗ್ರ 10ರೊಳಗೆ ಮೊದಲ ಬಾರಿ ಪ್ರವೇಶಿಸಿದ ಸಾಧನೆ ಮಾಡಿದ್ದಾರೆ.
ಭಾರತದಲ್ಲಿ ನಡೆಯುತ್ತಿರುವ ಸರಣಿಯ ಮೂರು ಪಂದ್ಯಗಳಲ್ಲಿ 2 ಅರ್ಧಶತಕ ಸೇರಿದಂತೆ ಇಶಾನ್ ಕಿಶನ್ 164 ರನ್ ಗಳಿಸಿದ್ದರು. ಅಲ್ಲದೇ ಮೂರನೇ ಪಂದ್ಯದಲ್ಲಿ ಅರ್ಧಶತಕ ಸಿಡಿಸಿ ಭಾರತದ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದರು.
ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಕಿಶನ್ ಇದಕ್ಕೂ ಮುನ್ನ ಶ್ರೀಲಂಕಾ ವಿರುದ್ದನದ ಸರಣಿಯಲ್ಲೂ 89 ರನ್ ಸಿಡಿಸಿದ್ದರು. ಈ ಮೂಲಕ ಇಶಾನ್ ಕಿಶನ್ ಅಗ್ರ 10ರೊಳಗೆ ಸ್ಥಾನ ಪಡೆದ ಏಕೈಕ ಭಾರತೀಯ ಬ್ಯಾಟ್ಸ್ ಮನ್ ಎನಿಸಿಕೊಂಡಿದ್ದಾರೆ.
ಐಸಿಸಿ ಟಿ-20ನ ಬ್ಯಾಟಿಂಗ್ ವಿಭಾಗದಲ್ಲಿ ಪಾಕಿಸ್ತಾನದ ಬಾಬರ್ ಅಜಮ್ ಅಗ್ರಸ್ಥಾನದಲ್ಲಿದ್ದರೆ ಸಹ ಆಟಗಾರ ಮೊಹಮದ್ ರಿಜ್ವಾನ್ 2ನೇ ಸ್ಥಾನ ಅಲಂಕರಿಸಿದ್ದಾರೆ. ದಕ್ಷಿಣ ಆಫ್ರಿಕಾದ ಏಡಿಯನ್ ಮರ್ಕರಂ 3ನೇ ಸ್ಥಾನಕ್ಕೆ ಕುಸಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments