ಎಟಿಎಂಗೆ ಹಣ ತುಂಬಿಸುತ್ತಿದ್ದಾಗ ದರೋಡೆ: 18.5ಲಕ್ಷ ಹಣ ದೋಚಿದ ಕಳ್ಳರು

Webdunia
ಸೋಮವಾರ, 30 ಅಕ್ಟೋಬರ್ 2017 (15:46 IST)
ಬೆಂಗಳೂರು: ಇತ್ತೀಚೆಗೆ ರಾಜ್ಯದಲ್ಲಿ ಎಟಿಎಂ ಮಷೀನ್ ನಲ್ಲಿರುವ ಹಣ ದರೋಡೆ ಪ್ರಕರಣಗಳು ರಾಜ್ಯದಲ್ಲಿ ಹೆಚ್ಚು ನಡೆಯುತ್ತಿವೆ. ಇಂದು ಸಹ ಎಟಿಎಂಗೆ ಹಣ ತುಂಬಿಸುತ್ತಿದ್ದ ವೇಳೆ ದುಷ್ಕರ್ಮಿಗಳು ದಾಳಿ ಮಾಡಿ ದರೋಡೆ ಮಾಡಿರುವ ಘಟನೆ ಜಾಲಹಳ್ಳಿ ಕ್ರಾಸ್‌ ನಲ್ಲಿ ನಡೆದಿದೆ.

ಜಾಲಹಳ್ಳಿ ಕ್ರಾಸ್‌ ಬಳಿಯ ಐಸಿಐಸಿಐ ಶಾಖೆ ಎಟಿಎಂಗೆ ಬ್ಯಾಂಕ್ ಸಿಬ್ಬಂದಿ ಹಣ ತುಂಬಿಸುತ್ತಿದ್ದ ವೇಳೆ ಬೈಕ್‌ ನಲ್ಲಿ ಬಂದ ದರೋಡೆಕೋರರು ಹಣ ತುಂಬಿಸುತ್ತಿದ್ದ ಸಿಬ್ಬಂದಿ ಮೇಲೆ ದಾಳಿ ಮಾಡಿದ್ದಾರೆ. ಪ್ರತಿ ದಾಳಿಗೆ ಮುಂದಾದ ಕಸ್ಟೋಡಿಯನ್‌ ಗೆ ಚಾಕುವಿನಿಂದ ಇರಿದು 18.5 ಲಕ್ಷ ರೂ. ಹಣ ದೋಚಿದ್ದಾರೆ ಎನ್ನಲಾಗಿದೆ.

ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಸಾಗರ್‌ ಹಾಗೂ ಮೋಹನ್‌ ಎಂಬುವವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಶಬರಿಮಲೆಗೆ ಹೋಗುತ್ತಿದ್ದ ಭಕ್ತರ ಜೊತೆ ಬಸ್ ಕಂಡಕ್ಟರ್ ವರ್ತನೆಗೆ ನೆಟ್ಟಿಗರು ಫಿದಾ video

ಸೈಡಿಗೆ ಹೋಗೋ.. ನೀರಾಟಕ್ಕೆ ಅಡ್ಡಿಪಡಿಸಿದ್ದಕ್ಕೆ ಕುಕ್ಕೆ ಸುಬ್ರಹ್ಮಣ್ಯದ ಆನೆ ಮಾಡಿದ್ದೇನು

ಕೇರಳದಲ್ಲಿ ಪಂಚಾಯತ್ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧಿಸಲಿರುವ ಸೋನಿಯಾ ಗಾಂಧಿ: ಅಚ್ಚರಿ ಬೆಳವಣಿಗೆ

ಮುಂದಿನ ಸುದ್ದಿ
Show comments