Select Your Language

Notifications

webdunia
webdunia
webdunia
webdunia

ಅಪ್ರತಿಮ ಕಲಾವಿದ ಕುಂಬ್ಳೆ ಸುಂದರ್ ರಾವ್ ಇನ್ನಿಲ್ಲ

ಅಪ್ರತಿಮ ಕಲಾವಿದ ಕುಂಬ್ಳೆ ಸುಂದರ್ ರಾವ್ ಇನ್ನಿಲ್ಲ
ಮಂಗಳೂರು , ಬುಧವಾರ, 30 ನವೆಂಬರ್ 2022 (08:52 IST)
ಮಂಗಳೂರು : ಯಕ್ಷಗಾನದ ಅಪ್ರತಿಮ ಕಲಾವಿದ, ಮಾಜಿ ಶಾಸಕ ಕುಂಬ್ಳೆ ಸುಂದರ್ ರಾವ್ (90) ವಿಧಿವಶರಾಗಿದ್ದಾರೆ.

ಕಾಯರ್ಕಾಡಿ ಕುಂಞಕಣ್ಣ ಮತ್ತು ಕಲ್ಯಾಣಿ ದಂಪತಿ ಸುಪುತ್ರರಾಗಿ 1934ರ ಮಾರ್ಚ್ 20ರಲ್ಲಿ ಕೇರಳ ರಾಜ್ಯದ ಕುಂಬ್ಳೆಯಲ್ಲಿ ಸುಂದರ್ ರಾವ್ ಜನಿಸಿದರು.

ಯಕ್ಷಗಾನ ಮತ್ತು ತಾಳ-ಮದ್ದಳೆ (ಸಾಂಪ್ರದಾಯಿಕ ನೃತ್ಯ) ಕಲಾವಿದರಾಗಿದ್ದ ಸುಂದರ್ ರಾವ್ ಮಂಗಳೂರಿನ ಆಗಿನ ಸುರತ್ಕಲ್ ಕ್ಷೇತ್ರದ ಶಾಸಕರಾಗಿಯೂ ಸೇವೆ ಸಲ್ಲಿಸಿದ್ದಾರೆ. 1994 ರಿಂದ 1999ರ ವರೆಗೆ ಬಿಜೆಪಿಯಿಂದ ಸುರತ್ಕಲ್ ಕ್ಷೇತ್ರದ ಶಾಸಕರಾಗಿ ಸೇವೆ ಸಲ್ಲಿಸಿದ್ದರು. 

ಇವರು ಸುರತ್ಕಲ್, ಧರ್ಮಸ್ಥಳ ಮತ್ತು ಇರಾ ಯಕ್ಷಗಾನ ಮೇಳಗಳಲ್ಲಿ ಕಲಾವಿದರಾಗಿ ಕಾರ್ಯ ನಿರ್ವಹಿಸಿದ್ದರು.

ಕರ್ನಾಟಕ ರಾಜ್ಯ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ ಇವರು ಯಕ್ಷಗಾನ ಕಲಾವಿದರೊಬ್ಬರು ನೇರವಾಗಿ ಮತದಾರರಿಂದಲೇ ಆರಿಸಲ್ಪಟ್ಟ ಪ್ರಪ್ರಥಮ ಶಾಸಕರೆಂಬ ಹೆಗ್ಗಳಿಕೆಯನ್ನೂ ಪಡೆದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಾರುಕಟ್ಟೆಗೆ ಡಿಜಿಟಲ್ ರುಪಿ ಮೊದಲ ಪ್ರಯೋಗ