Select Your Language

Notifications

webdunia
webdunia
webdunia
webdunia

ಸುಪ್ರೀಂ ಕೋರ್ಟ್ ನಲ್ಲಿ ಈದ್ಗಾ ಅರ್ಜಿ ವಿಚಾರಣೆ

Idga application hearing in the Supreme Court
bangalore , ಮಂಗಳವಾರ, 30 ಆಗಸ್ಟ್ 2022 (14:24 IST)
ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿ ಸಂಬಂಧ ಅರ್ಜಿಗಳನ್ನು ಪರಿಶೀಲಿಸಿ ಮೈದಾನದಲ್ಲಿ ಗಣೇಶೋತ್ಸವ ಆಚರಿಸಲು ಅನುಮತಿ ನೀಡುವಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದೆ. ಆಗಸ್ಟ್ 31ರಿಂದ ನಿರ್ದಿಷ್ಟ ಅವಧಿಗೆ ನ್ಯಾಯಾಲಯ ಅನುಮತಿ ನೀಡಿದೆ. ಆದರೆ, ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಕರ್ನಾಟಕ ವಕ್ಫ್ ಮಂಡಳಿ ಮೇಲ್ಮನವಿ ಸಲ್ಲಿಸಿದ್ದು, ಇಂದು ಅರ್ಜಿ ವಿಚಾರಣೆ ನಡೆಯಲಿದೆ. ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ನಿರ್ಧಿಷ್ಟ ಅವಧಿಗೆ ಅನುಮತಿಯನ್ನು ನೀಡಬಹುದು, ಹಿಂದು ಹಾಗೂ ಮುಸ್ಲಿಮರು ಧಾರ್ಮಿಕ ಆಚರಣೆಗೆ ನಿರ್ಧಿಷ್ಟ ಅವಧಿಗೆ ಮೈದಾನ ಬಳಸಲು ರಾಜ್ಯ ಸರ್ಕಾರ ಅನುಮತಿಸಬಹುದು ಎಂದು ಹೈಕೋರ್ಟ್ ತನ್ನ ಆದೇಶದಲ್ಲಿ ಹೇಳಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಹಾಲಿನ ದರ ಪ್ರತಿ ಲೀಟರ್‌ ಗೆ 3 ರೂಪಾಯಿ ಹೆಚ್ಚಿಸುವಂತೆ ಪ್ರಸ್ತಾಪ