Webdunia - Bharat's app for daily news and videos

Install App

ಈದ್ಗಾ ಮಿಲಾದ್ ಮೆರವಣಿಗೆಯಲ್ಲಿ ಸಿಪಿಐ ಜೊತೆ ವಾಗ್ವಾದ

Webdunia
ಸೋಮವಾರ, 10 ಅಕ್ಟೋಬರ್ 2022 (14:06 IST)
ಈದ್ ಮಿಲಾದ್ ಮೆರವಣಿಗೆಯಲ್ಲಿ ಡಿಜೆ ಸೌಂಡ್ ದೊಡ್ಡದಾಗಿ ಹಾಕಿಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಸೌಂಡ್ ಕಡಿಮೆ ಮಾಡಿ ಎಂದು ಹೇಳಿದ ಸಿಪಿಐ ಸಂತೋಷ ಶೆಟ್ಟಿಯವರೊಂದಿಗೆ ಕೆಲವು ಯುವಕರು ಉದ್ದಟತನ ವರ್ತನೆ ತೋರಿದ ಘಟನೆ ಪಟ್ಟಣದಲ್ಲಿ ನಡೆದಿದೆ.
ಪಟ್ಟಣದಲ್ಲಿ ಈದ್ ಮಿಲಾದ್ ಪ್ರಯುಕ್ತ ಮುಸ್ಲಿಂ ಸಮುದಾಯದವರು ವಾಹನಗಳಲ್ಲಿ ಟ್ಯಾಬ್ಲೋಗಳೊಂದಿಗೆ ಅಲಂಕರಿಸಿ ಮೆರವಣಿಗೆ ಮಾಡುತ್ತಿದ್ದರು. ಈ ಮೆರವಣಿಗೆಯಲ್ಲಿ ಕೆಲವರು ಡಿಜೆ ಬಳಸಿಕೊಂಡು ಸೌಂಡ್ ಕಡಿಮೆ ಮಾಡಿ ಸಾಗಿದ್ದರು. ಆದರೆ ಒಂದು ತಂಡ ಮಾತ್ರ ಜೋರು ಡಿಜೆ ಸೌಂಡ್‌ ಮೂಲಕ ಹಾಡುಗಳನ್ನು ಹಾಕಿಕೊಂಡು ಹೋಗುತ್ತಿದ್ದರು. ಇದನ್ನು ಮೆರವಣಿಗೆಯಲ್ಲಿ ಇದ್ದ ಕೆಲವರು ಅಸಮಾಧಾನ ವ್ಯಕ್ತಪಡಿಸಿ ವಿಷಯವನ್ನು ಅಂಕೋಲಾ ಪೊಲೀಸ್ ನಿರೀಕ್ಷಕ ಸಂತೋಷ ಶೆಟ್ಟಿ ಅವರ ಗಮನಕ್ಕೆ ತಂದಿದ್ದರು.
 
ತಕ್ಷಣ ಸಿಪಿಐ ಸಂತೋಷ ಶೆಟ್ಟಿಯವರು ಡಿಜೆ ಬಳಿ ತೆರಳಿ ಡಿಜೆ ಸೌಂಡ್ ಕಡಿಮೆ ಮಾಡುವಂತೆ ತಿಳಿಸಿದ ಸಂದರ್ಭದಲ್ಲಿ ಆ ತಂಡದ ಯುವಕರು ಸಿಪಿಐಯೊಂದಿಗೆ ವಾಗ್ವಾದಕ್ಕಿಳಿದ್ದಿದ್ದಾರೆ. ಸಿಪಿಐ ಶಾಂತವಾಗಿ ಯುವಕರಿಗೆ ಮನವರಿಕೆ ಮಾಡುವ ಪ್ರಯತ್ನ ನಡೆಸುತ್ತಿದ್ದರೂ ಅದನ್ನು ಕೇಳದ ಹಾಗೆ ಯುವಕರು ವರ್ತಿಸಿದ್ದಾರೆ. ಬಳಿಕ ಸಮಾಧಾನದಿಂದಲೇ ಯುವಕರೊಂದಿಗೆ ಮಾತನಾಡಿ ಮೆರವಣಿಗೆ ಸಾಗಲು ಅವಕಾಶ ಮಾಡಿಕೊಟ್ಟರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments