Select Your Language

Notifications

webdunia
webdunia
webdunia
webdunia

ಒಬ್ಬ ತಂದೆಗೆ ಹುಟ್ಟಿದ ಮಕ್ಕಳೇ ಆಗಿದ್ದಲ್ಲಿ ಪ್ರಶ್ನೆಗೆ ಉತ್ತರಿಸುತ್ತಾರೆ- ಸಿಟಿ ರವಿ ವಿವಾದಾತ್ಮಕ ಹೇಳಿಕೆ

ಒಬ್ಬ ತಂದೆಗೆ ಹುಟ್ಟಿದ ಮಕ್ಕಳೇ ಆಗಿದ್ದಲ್ಲಿ ಪ್ರಶ್ನೆಗೆ ಉತ್ತರಿಸುತ್ತಾರೆ- ಸಿಟಿ ರವಿ ವಿವಾದಾತ್ಮಕ ಹೇಳಿಕೆ
ಬೆಂಗಳೂರು , ಭಾನುವಾರ, 24 ಮಾರ್ಚ್ 2019 (10:25 IST)
ಬೆಂಗಳೂರು : ಬಿ.ಎಸ್. ಯಡಿಯೂರಪ್ಪ ಡೈರಿ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.


ಕಾಂಗ್ರೆಸ್ ನ ಡೈರಿ ಆರೋಪವನ್ನು ತಳ್ಳಿ ಹಾಕಿರುವ ಬಿಜೆಪಿ ಕಾಂಗ್ರೆಸ್ ನಾಯಕರಿಗೆ 10 ಪ್ರಶ್ನೆಗಳನ್ನು ಕೇಳಿ, ಅದಕ್ಕೆ ಉತ್ತರ ನೀಡುವಂತೆ ಆಗ್ರಹಿಸಿದ್ದಾರೆ.


ಈ ಬಗ್ಗೆ ಮಾತನಾಡಿದ ಸಿಟಿ ರವಿ, ಡೈರಿ ಬಿಡುಗಡೆ ಮಾಡಿರುವ ಕಾಂಗ್ರೆಸ್ ನಾಯಕರು ನಾನು ಕೇಳಿರುವ ಹತ್ತು ಪ್ರಶ್ನೆಗಳಿಗೆ ಉತ್ತರಿಸಲಿ. ಡೈರಿಯನ್ನು ತಮಗೆ ತಂದುಕೊಟ್ಟವರು ಯಾರು ಎಂಬುದನ್ನು ಬಹಿರಂಗಪಡಿಸಲಿ. ಒಬ್ಬ ತಂದೆಗೆ ಹುಟ್ಟಿದ ಮಕ್ಕಳೇ ಆಗಿದ್ದಲ್ಲಿ ಕಾಂಗ್ರೆಸ್ ನಾಯಕರು ನಮ್ಮ ಪ್ರಶ್ನೆಗೆ ಉತ್ತರಿಸುತ್ತಾರೆ. ಇಲ್ಲವಾದಲ್ಲಿ ಅವರು ಒಬ್ಬ ತಂದೆಗೆ ಹುಟ್ಟಿದವರಲ್ಲ ಎಂದು ನಾವು ಅಂದುಕೊಳ್ಳಬೇಕಾಗುತ್ತದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಯಡಿಯೂರಪ್ಪ ಮನೆ ಮುಂದೆಯೇ ನಡೆಯಿತು ಮಾರಾಮಾರಿ?