Select Your Language

Notifications

webdunia
webdunia
webdunia
webdunia

ರಾಜ್ಯದ ರೈತರ ಹಿತ ಕಾಪಾಡಿ,ಕೇಂದ್ರ ತಂಡಕ್ಕೆ ಸಿಎಂ ಮನವಿ

family
bangalore , ಶುಕ್ರವಾರ, 6 ಅಕ್ಟೋಬರ್ 2023 (21:00 IST)
ರಾಜ್ಯದ ಬರ ಪರಿಸ್ಥಿತಿ ಅಧ್ಯಯನಕ್ಕೆ ಆಗಮಿಸಿರುವ ಕೇಂದ್ರದ ಕೃಷಿ ಇಲಾಖೆಯ ಜಂಟಿ ಕಾರ್ಯದರ್ಶಿ ಅಜಿತ್‌ ಕುಮಾರ್‌ ಸಾಹು ನೇತೃತ್ವದ 10 ಅಧಿಕಾರಿಗಳ ತಂಡವು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಂದಾಯ ಸಚಿವ ಕೃಷ್ಣಬೈರೇಗೌಡ ಅಧ್ಯಕ್ಷತೆಯ ಸಚಿವ ಸಂಪುಟ ಉಪಸಮಿತಿಯೊಂದಿಗೆ ಪ್ರತ್ಯೇಕವಾಗಿ ಸಭೆ ನಡೆಸಿತು.ನಿನ್ನೆ ವಿಧಾನಸೌಧದಲ್ಲಿ ಪ್ರತ್ಯೇಕವಾಗಿ ನಡೆದ ಸಭೆಯಲ್ಲಿ ರಾಜ್ಯದ ಬರ ಪರಿಸ್ಥಿತಿಯ ಕುರಿತು ಕೇಂದ್ರ ತಂಡ ಮಾಹಿತಿ ಪಡೆದುಕೊಂಡಿತು. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮನ್ನು ಭೇಟಿಯಾದ ಕೇಂದ್ರದ ಬರ ಅಧ್ಯಯನ ತಂಡವನ್ನು ಉದ್ದೇಶಿಸಿ ರಾಜ್ಯದ ರೈತರ ಹಿತರಕ್ಷಣೆಗೆ ಪೂರಕವಾಗಿ ಕ್ರಮ ಕೈಗೊಳ್ಳುವಂತೆ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

300 ಕೋಟಿ ದುರ್ಬಳಕೆ,KSOU ಅಧಿಕಾರಿಗಳ ವಿರುದ್ಧ CBI ಕೇಸ್