Select Your Language

Notifications

webdunia
webdunia
webdunia
webdunia

ಅಂಬರೀಶ್ ಬಿಜೆಪಿಗೆ ಬಂದರೆ ಸ್ವಾಗತ: ಆರ್.ಅಶೋಕ್

ಅಂಬರೀಶ್
ಮಾಜಿ ಸಚಿವ ಹಾಗೂ ನಟ ರೆಬಲ್ ಸ್ಟಾರ್ ಅಂಬರೀಶ್ ಬಿಜೆಪಿ ಪಕ್ಷಕ್ಕೆ ಬರುವುದಾದರೆ ನಮ್ಮ ಸ್ವಾಗತವಿದೆ ಎಂದು ಮಾಜಿ ಡಿಸಿಎಂ ಆರ್.ಅಶೋಕ್ ಹೇಳಿದ್ದಾರೆ.
 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ರಾಜ್ಯ ಕಂಡ ಅಪರೂಪದ ರಾಜಕಾರಣಿ. ಅವರು ರಾಜ್ಯಕ್ಕೆ ಹಲವಾರು ಕೊಡುಗೆಗಳನ್ನು ಕೊಟ್ಟಿದ್ದಾರೆ. ಇದೀಗ ಅವರು ಕಾಂಗ್ರೆಸ್ ನಡೆಸಿಕೊಂಡ ರೀತಿಯಿಂದ ಬೇಸತ್ತು ರಾಜೀನಾಮೆ ನೀಡಿದ್ದಾರೆ. ಪಕ್ಷತೀತವಾಗಿ ನಾನು ಅವರ ಅಭಿಮಾನಿ. ಅವರ ಅಭಿಮಾನಿಯಾಗಿ ಅವರನ್ನು ಬಿಜೆಪಿ ಪಕ್ಷಕ್ಕೆ ಸ್ವಾಗತಿಸುತ್ತೇನೆ ಎಂದರು. 
 
ಮುಖ್ಯಮಂತ್ರಿ ಸಿದ್ದರಾಮಯ್ಯರ ನಡೆಯಿಂದ ಕಾಂಗ್ರೆಸ್ ಒಡೆದ ಮನೆಯಾಗಿದೆ. ಹಿರಿಯ ನಾಯಕರು ಅಸಮಾಧಾನಗೊಂಡಿದ್ದಾರೆ. ಸಿಎಂ ತಮ್ಮ ನಿಲುವು ಬದಲಾಯಿಸಿಕೊಳ್ಳದಿದ್ದರೆ ಕಾಂಗ್ರೆಸ್ ಪಕ್ಷ ಪತನವಾಗುವುದು ಗ್ಯಾರಂಟಿ ಎಂದು ವಿಶ್ಲೇಷಿಸಿದರು. 
 
ಹಿರಿಯ ರಾಜಕಾರಣಿ ಅಂಬರೀಶ್‌ರನ್ನು ಕಾಂಗ್ರೆಸ್ ಪಕ್ಷದಲ್ಲಿ ಮೂಲೆಗುಂಪು ಮಾಡಲಾಗಿದೆ. ನಾನು ಅಂಬರೀಶ್ ಒಳ್ಳೆಯ ಸ್ನೇಹಿತರು. ಅವರು ಬಿಜೆಪಿ ಪಕ್ಷಕ್ಕೆ ಬರುವುದಕ್ಕೆ ನಮ್ಮ ಅಡ್ಡಿಯೇನೂ ಇಲ್ಲ ಎಂದು ಸ್ಪಷ್ಟಪಡಿಸಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಯುಪಿ ಚುನಾವಣೆ: ಅತಿ ಸಿರಿವಂತ ಅಭ್ಯರ್ಥಿ ಯಾರು ಗೊತ್ತೇ?