Select Your Language

Notifications

webdunia
webdunia
webdunia
webdunia

ಯಾರಾದ್ರೂ ಲಂಚ ಕೇಳಿದ್ರೆ ನೇರವಾಗಿ ನನಗೆ ಪತ್ರ ಬರೆಯಿರಿ : ಶಿವಕುಮಾರ್

ಯಾರಾದ್ರೂ ಲಂಚ ಕೇಳಿದ್ರೆ ನೇರವಾಗಿ ನನಗೆ ಪತ್ರ ಬರೆಯಿರಿ : ಶಿವಕುಮಾರ್
ರಾಮನಗರ , ಭಾನುವಾರ, 4 ಜೂನ್ 2023 (11:18 IST)
ರಾಮನಗರ : ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿಗಳ ವಿಚಾರವಾಗಿ ಯಾರಾದರೂ ಲಂಚ ಕೇಳಿದರೆ ನೇರವಾಗಿ ನನಗೆ ಪತ್ರ ಬರೆಯಿರಿ, ಒದ್ದು ಒಳಗೆ ಹಾಕಿಸುತ್ತೇನೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
 
ಕನಕಪುರದ ಕಬ್ಬಾಳು ಗ್ರಾಮದಲ್ಲಿ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರ ನುಡಿದಂತೆ ನಡೆದಿದೆ. ಐದು ಗ್ಯಾರಂಟಿಗಳನ್ನು ಈಡೇರಿಸಿದ್ದೇವೆ. ಮುಂದಿನ ತಿಂಗಳಿನಿಂದ ಗೃಹಜ್ಯೋತಿ ಯೋಜನೆ ಆರಂಭವಾಗಲಿದೆ.

ಹೆಣ್ಣು ಮಕ್ಕಳಿಗೆ ಗೃಹಲಕ್ಷ್ಮಿ ಯೋಜನೆ ಮೂಲಕ ತಿಂಗಳಿಗೆ 2 ಸಾವಿರ ರೂ. ಕೊಡುತ್ತೇವೆ. ಯಾರು ಯಜಮಾನಿ ಎಂದು ನೀವು ತೀರ್ಮಾನ ಮಾಡಿಕೊಳ್ಳಬೇಕು. ಅಲ್ಲದೆ ಈ ಯೋಜನೆಗೆ ಹೆಣ್ಣುಮಕ್ಕಳ ಅಕೌಂಟ್ ನಂಬರನ್ನೇ ಕೊಡಬೇಕು. ಈ ಯೋಜನೆಗಳಿಗೆ ಜೂ.15ರಿಂದ ಜು.15ರ ವರೆಗೆ ಅರ್ಜಿ ಹಾಕಬೇಕು. ಯಾರಿಗೂ ಲಂಚ ಕೊಡಬೇಡಿ ಎಂದಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

200 ಯೂನಿಟ್ ಫ್ರೀ ಅಂದಿಲ್ಲವೆಂದ್ರು ಜಾರ್ಜ್