Select Your Language

Notifications

webdunia
webdunia
webdunia
webdunia

ಸಿಎಂ ಬದಲಾದರೆ ಎಲ್ಲಾ ಬದಲಾಗುತ್ತಾ? ಸಿದ್ದರಾಮಯ್ಯ ವ್ಯಂಗ್ಯ

ಸಿಎಂ ಬದಲಾದರೆ ಎಲ್ಲಾ ಬದಲಾಗುತ್ತಾ? ಸಿದ್ದರಾಮಯ್ಯ ವ್ಯಂಗ್ಯ
bangalore , ಬುಧವಾರ, 28 ಜುಲೈ 2021 (17:54 IST)
ಬಸವರಾಜ್ ಬೊಮ್ಮಾಯಿ ಹೆಸರು ಸೂಚಿಸಿರುವುದು ಬಿಎಸ್ ಯಡಿಯೂರಪ್ಪ. ಹಾಗಾಗಿ ಅವರು ಸ್ವತಂತ್ರವಾಗಿ ಕಾರ್ಯ ನಿರ್ವಹಿಸಲು ಸಾಧ್ಯವಾ? ಈಗಲೂ ಯಡಿಯೂರಪ್ಪ ಸರಕಾರದ ಮೇಲೆ ಹಿಡಿತ ಹೊಂದಿರುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.
ಮೈಸೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೊಮ್ಮಾಯಿ ಅವರ ಬಗ್ಗೆ ಈಗಲೇ ಏನೂ ಮಾತನಾಡಲಾರೆ. 3 ತಿಂಗಳು ನಾನು ಏನೂ ಮಾತನಾಡಲ್ಲ. ಅವರ ಆಡಳಿತವನ್ನು ಕಾದು ನೋಡೋಣ. ಈಗಲೇ ಅವರ ಮೇಲೆ ಸುಮ್ಮನೆ ದೂರುವುದಿಲ್ಲ. ಒಳ್ಳೆಯ ಕೆಲಸ ಮಾಡಲಿ ಎಂದು ಆಶಿಸುತ್ತೇನೆ ಎಂದರು.
ಎಸ್ ಆರ್ ಬೊಮ್ಮಾಯಿ ಅವರ ಗುಣ ಮಗನಿಗೆ ಬರುತ್ತೆ ಎಂದು ಹೇಳಲು ಸಾಧ್ಯವಿಲ್ಲ. ಮಹಾತ್ಮಾ ಗಾಂಧಿ ಮಗ ಕುಡುಕನಾದ. ಅವರು ಕೂಡ ಮಹಾತ್ಮ ಗಾಂಧಿಯಾಗಲಿಲ್ಲ. ಅದೇ ರೀತಿ ಬೊಮ್ಮಾಯಿ ಮಗ ತಂದೆಯಂತೆ ಆಗುತ್ತಾರೆ ಎಂದು ಹೇಳಲು ಸಾಧ್ಯವಿಲ್ಲ. ತಂದೆಯ ಗುಣ ಕೆಲವು ಮಕ್ಕಳಿಗೆ ಬರುವುದಿಲ್ಲ ಎಂದು ಅವರು ಹೇಳಿದರು.
ಮುಖ್ಯಮಂತ್ರಿ ಬದಲಾದರೆ ಎಲ್ಲವೂ ಬದಲಾಗುತ್ತಾ..? ಯಡಿಯೂರಪ್ಪ ಇಳಿದಿದ್ದಾರೆ. ಬೊಮ್ಮಾಯಿ ಸಿಎಂ ಆಗಿದ್ದಾರೆ ಎಂದ ಮಾತ್ರಕ್ಕೆ ಬಿಜೆಪಿಯ ಐಡಿಯಾಲಜಿ ಬದಲಾಗುತ್ತಾ? ಕೋಮುವಾದ ಹೊರಟುಹೋಗುತ್ತಾ? ಹಿಂದುತ್ವದ ಅವರ ಅಜೆಂಡಾ ಬದಲಾಗುತ್ತಾ? ಬಿಜೆಪಿಯವರು ಎಂದಿಗೂ ಅಲ್ಪಸಂಖ್ಯಾತರು, ದಲಿತರು, ಬಡವರ ಪರವಾಗಿ ಇಲ್ಲ. ಆದರಿಂದ ಬಿಜೆಪಿ ಸರ್ಕಾರದಿಂದ ಯಾವುದೇ ನಿರೀಕ್ಷೆ ಮಾಡುವುದಿಲ್ಲ. ಆದರೆ ಬಸವರಾಜ ಬೊಮ್ಮಾಯಿಗೆ ಒಂದು ಅವಕಾಶ ಸಿಕ್ಕಿದೆ. ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಒಳ್ಳೆಯ ಆಡಳಿತ ನೀಡಲಿ ಎಂದು ಸಿದ್ದರಾಮಯ್ಯ ಆಶಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

TATAದಲ್ಲಿ ಕೆಲಸ ಮಾಡಿದ್ರು ಸಿಎಂ ಬೊಮ್ಮಾಯಿ..! ಗಾಲ್ಫ್ , ಕ್ರಿಕೆಟ್ ಫೇವರೇಟ್