ಬುರುಡೆ ಪ್ರಕರಣದಲ್ಲಿ ಸಾಮಾನ್ಯಜ್ಞಾನ ಬಳಸಿದ್ದರೆ ಇಷ್ಟೊಂದು ರಾದ್ಧಾಂತ ಆಗುತ್ತಿರಲಿಲ್ಲ: ರಾಜಣ್ಣ

Sampriya
ಭಾನುವಾರ, 24 ಆಗಸ್ಟ್ 2025 (16:24 IST)
ತುಮಕೂರು:  ಧರ್ಮಸ್ಥಳದ ಅನಾಮಿಕ ತಲೆಬುರುಡೆ ತಂದುಕೊಟ್ಟ ತಕ್ಷಣ ಆತನ ಬಗ್ಗೆ ಪೂರ್ವಪರ ವಿಚಾರಿಸದೆ, 164 ಹೇಳಿಕೆ ಪಡೆದು ಎಸ್‌ಐಟಿ ರಚಿಸಲಾಯಿತು. ತನಿಖೆಯ ಪ್ರಾರಂಭಿಕ ಹಂತದಲ್ಲಿ ಎಲ್ಲರು ಎಡವಿದ್ದಾರೆ ಎಂದು ಮಾಜಿ ಸಚಿವ ಕೆ.ಎನ್‌.ರಾಜಣ್ಣ ಹೇಳಿದರು. 

ಅನಾಮಿಕ ಎಲ್ಲಿಂದ ಬುರುಡೆ ತಂದಿದ್ದರು, ಕಾನೂನು ಪ್ರಕಾರವೇ ಗುಂಡಿಯಿಂದ ಬುರುಡೆ ಹೊರ ತೆಗೆಯಲಾಗಿದೆಯೇ? ಎಂಬುವುದನ್ನು ಪರಿಶೀಲಿಸಿದ್ದರೆ ಇಷ್ಟೆಲ್ಲಾ ರಾದ್ಧಾಂತ ಆಗುತ್ತಿರಲಿಲ್ಲ ಎಂದು ಸರ್ಕಾರದ ವಿರುದ್ಧವೇ ಅಸಮಧಾನ ವ್ಯಕ್ತಪಡಿಸಿದರು.

ಧರ್ಮಸ್ಥಳಕ್ಕೆ ಅಪಕೀರ್ತಿ ತರುವ ಪ್ರಯತ್ನ ನಡೆಯಿತು. ಕೆಲ ಏಜೆನ್ಸಿಗಳು ವಿನಾಕಾರಣ ಈ ವಿಚಾರವನ್ನು ಬಹಳ ದೊಡ್ಡಮಟ್ಟಕ್ಕೆ ತೆಗೆದುಕೊಂಡು ಹೋದವು. ಕಂಡಲ್ಲಿ ಗುಂಡಿ ತೆಗೆದು ಅಲ್ಲಿನ ನಿವಾಸಿಗಳಿಗೆ ತೊಂದರೆ ನೀಡಲಾಯಿತು. ಪ್ರಾರಂಭದಲ್ಲಿ ಸಾಮಾನ್ಯ ಜ್ಞಾನ ಬಳಸಿದ್ದರೆ ಇದೆಲ್ಲ ಆಗುತ್ತಿರಲಿಲ್ಲ ಎಂದು ತಿಳಿಸಿದರು.

ಇದೇ ವೇಳೆ ಡಿಸಿಎಂ ಶಿವಕುಮಾರ್‌ ವಿರುದ್ಧವೂ ಅಸಮಾಧಾನ ವ್ಯಕ್ತಪಡಿಸಿದರು. ಅವರು ಆರ್‌ಎಸ್‌ಎಸ್‌ ಗೀತೆ ಹಾಡಬಹುದು, ಖಾಸಗಿ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕ ಅಮಿತ್‌ ಶಾ ಜತೆಗೆ ವೇದಿಕೆ ಹಂಚಿಕೊಳ್ಳಬಹುದು, ಏನು ಬೇಕಾದರೂ ಮಾಡಬಹುದು. ನಾವು ಏನೂ ಮಾತಾಡುವಂತಿಲ್ಲ ಎಂದು ವ್ಯಂಗ್ಯವಾಡಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೃಹಲಕ್ಷ್ಮಿ ಯೋಜನೆಯಲ್ಲೂ ಹಗರಣವೇ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ತಪ್ಪು ಲೆಕ್ಕ ಕೊಟ್ಟ ಆರೋಪ

ಬಗರ್ ಹುಕುಂ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿದರೆ ಶಿಕ್ಷೆ: ಸಚಿವ ಕೃಷ್ಣಭೈರೇಗೌಡ

ಡಿಕೆ ಶಿವಕುಮಾರ್, ವಿಜಯೇಂದ್ರ ಬಗ್ಗೆ ಬೆಚ್ಚಿಬೀಳುವ ಬಾಂಬ್ ಸಿಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

ಬ್ರೇಕ್ ಫಾಸ್ಟ್, ಡಿನ್ನರ್ ಮೀಟಿಂಗ್ ನಿಂದಲೇ ರಾಜ್ಯ ಕುಲಗೆಟ್ಟಿದೆ: ಬಿವೈ ವಿಜಯೇಂದ್ರ

ವೋಟ್ ಚೋರಿ ಚರಿತ್ರೆಯನ್ನೇ ಹೊಂದಿರುವ ಕಾಂಗ್ರೆಸ್ ಗೆ ಬಿಜೆಪಿ ಮೇಲೆ ಆರೋಪಿಸಲು ನೈತಿಕತೆಯಿಲ್ಲ: ಸಿಟಿ ರವಿ

ಮುಂದಿನ ಸುದ್ದಿ
Show comments