Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಅಭ್ಯರ್ಥಿಗೆ ಸೋಲಾದರೆ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ತೊಂದರೆ: ಬೈರತಿ ಸುರೇಶ್

ಕಾಂಗ್ರೆಸ್ ಅಭ್ಯರ್ಥಿಗೆ ಸೋಲಾದರೆ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ತೊಂದರೆ: ಬೈರತಿ ಸುರೇಶ್

Sampriya

ಕೋಲಾರ , ಗುರುವಾರ, 18 ಏಪ್ರಿಲ್ 2024 (18:31 IST)
photo Courtesy X
ಕೋಲಾರ: ಕಾಂಗ್ರೆಸ್ ಅಭ್ಯರ್ಥಿಗಳು ಸೋಲು ಕಂಡರೆ ಸಿದ್ದರಾಮಯ್ಯ ಅವರ ಸಿಎಂ ಸ್ಥಾನಕ್ಕೆ ತೊಂದರೆ ಆಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಅವರ ಹೇಳಿಕೆ ಸದ್ಯ ವೈರಲ್ ಆಗಿದೆ.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಗರದ ಹಾಲಿಸ್ಟರ್‌ ಭವನದಲ್ಲಿ ಗುರುವಾರ ಆಯೋಜಿಸಿದ್ದ ಕುರುಬ ಸಮುದಾಯದವರ ಸಭೆಯಲ್ಲಿ ಅವರು ಮಾತನಾಡಿದರು.

ಇನ್ನೂ ಲೋಕಸಭೆ ಚುನಾವಣೆ ನಂತರ ಸಿಎಂ ಸಿದ್ದರಾಮಯ್ಯ ಅವರನ್ನು ಕಿತ್ತೊಗೆಯುವುದಾಗಿ ಜೆಡಿಎಸ್‌ ರಾಜ್ಯ ಅಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ, ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ ಹೇಳುತ್ತಿದ್ದಾರೆ. ಅದಕ್ಕೆ ಅವಕಾಶ ಮಾಡಿಕೊಡಬೇಡಿ ಎಂದರು.

ಕಾಂಗ್ರೆಸ್‌ ಅಭ್ಯರ್ಥಿಗಳು ಸೋತರೆ ಸಿದ್ದರಾಮಯ್ಯ ಅವರ ಸಿಎಂ ಸ್ಥಾನಕ್ಕೆ ತೊಂದರೆ. ಆದ್ದರಿಂದ ಕಾಂಗ್ರೆಸ್‌ನ ಕೋಲಾರ ಅಭ್ಯರ್ಥಿ ಕೆ.ವಿ.ಗೌತಮ್ ಗೆಲ್ಲಿಸಲು ಸಹಾಯ ಮಾಡಬೇಕೆಂದು ಮನವಿ ಮಾಡಿದರು.


Share this Story:

Follow Webdunia kannada

ಮುಂದಿನ ಸುದ್ದಿ

ಉರಿ ಬಿಸಿಲಿಗೂ ಕ್ಯಾರೇ ಎನ್ನದೆ ಹೆಜ್ಜೆ ಹಾಕಿದ ಬೆಂಬಲಿಗರು: ನಾಮಪತ್ರ ಸಲ್ಲಿಸಿದ ಬಿ.ವೈ. ರಾಘವೇಂದ್ರ