ಕೋಲಾರ: ಕಾಂಗ್ರೆಸ್ ಅಭ್ಯರ್ಥಿಗಳು ಸೋಲು ಕಂಡರೆ ಸಿದ್ದರಾಮಯ್ಯ ಅವರ ಸಿಎಂ ಸ್ಥಾನಕ್ಕೆ ತೊಂದರೆ ಆಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಅವರ ಹೇಳಿಕೆ ಸದ್ಯ ವೈರಲ್ ಆಗಿದೆ.
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಗರದ ಹಾಲಿಸ್ಟರ್ ಭವನದಲ್ಲಿ ಗುರುವಾರ ಆಯೋಜಿಸಿದ್ದ ಕುರುಬ ಸಮುದಾಯದವರ ಸಭೆಯಲ್ಲಿ ಅವರು ಮಾತನಾಡಿದರು.
ಇನ್ನೂ ಲೋಕಸಭೆ ಚುನಾವಣೆ ನಂತರ ಸಿಎಂ ಸಿದ್ದರಾಮಯ್ಯ ಅವರನ್ನು ಕಿತ್ತೊಗೆಯುವುದಾಗಿ ಜೆಡಿಎಸ್ ರಾಜ್ಯ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಹೇಳುತ್ತಿದ್ದಾರೆ. ಅದಕ್ಕೆ ಅವಕಾಶ ಮಾಡಿಕೊಡಬೇಡಿ ಎಂದರು.
ಕಾಂಗ್ರೆಸ್ ಅಭ್ಯರ್ಥಿಗಳು ಸೋತರೆ ಸಿದ್ದರಾಮಯ್ಯ ಅವರ ಸಿಎಂ ಸ್ಥಾನಕ್ಕೆ ತೊಂದರೆ. ಆದ್ದರಿಂದ ಕಾಂಗ್ರೆಸ್‌ನ ಕೋಲಾರ ಅಭ್ಯರ್ಥಿ ಕೆ.ವಿ.ಗೌತಮ್ ಗೆಲ್ಲಿಸಲು ಸಹಾಯ ಮಾಡಬೇಕೆಂದು ಮನವಿ ಮಾಡಿದರು.