Select Your Language

Notifications

webdunia
webdunia
webdunia
webdunia

ಎಲ್ಲವೂ ಅಂದುಕೊಂಡಂತೆ ನಡೆದರೆ ಈ ದಿನವೇ ಸಿದ್ದರಾಮಯ್ಯರಿಂದ ರಾಜ್ಯ ಬಜೆಟ್

CM Siddaramaiah
ಬೆಂಗಳೂರು: 2026ರ ರಾಜ್ಯ ಬಜೆಟ್‌ ಮಂಡನೆಗೆ ರಾಜ್ಯ ಸರ್ಕಾರ ತೀರ್ಮಾನ ನಡೆಸಿದೆ. ಮಾರ್ಚ್‌ 6ರಂದು ಬಜೆಟ್‌ ಮಂಡಿಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ಆಪ್ತ ವಲಯಗಳಿಂದ ತಿಳಿದುಬಂದಿದೆ.

ಇನ್ನೂ ಎಲ್ಲವೂ ಅಂದುಕೊಂಡಂತೆ ನಡೆದರೆ ಮಾರ್ಚ್ 5 ರಿಂದ ಬಜೆಟ್ ಅಧಿವೇಶನ ಶುರುವಾಗಲಿದೆ. ಅಂದು ವಿಧಾನ ಮಂಡಲ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದು, ಮಾರ್ಚ್ 6 ರಂದು ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

ಕುರ್ಚಿ ಗುದ್ದಾಟದ ನಡುವೆ ಸಿಎಂ ಸಿದ್ದರಾಮಯ್ಯ ಅವರು ದಾಖಲೆ ಬಜೆಟ್‌ ಮಂಡಿಸಲು ಸಿದ್ಧತೆ ನಡೆಸಿದ್ದಾರೆ. 16 ಬಜೆಟ್‌ಗಳನ್ನ ಈಗಾಗಲೇ ಮಂಡಿಸಿದ್ದು, ಮಾರ್ಚ್‌ 6ರಂದು ಮಂಡಿಸುವ ಬಜೆಟ್‌ 17ನೇ ಬಜೆಟ್‌ ಆಗಲಿದೆ.

ಫೆ 1ರಂದು 2025-26ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಲಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ಮುಂಬೈ, ಮಹಾರಾಷ್ಟ್ರದ ನಗರವಲ್ಲ: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ವಿರೋಧ