Webdunia - Bharat's app for daily news and videos

Install App

ನಾನು ಹೇಳಿದಂತೆ ನಡೆದ್ರೆ ಸಿಎಂ ರಾಜೀನಾಮೆ ನೀಡ್ತಾರಾ: ಸಿದ್ದರಾಮಯ್ಯಗೆ ಯಡಿಯೂರಪ್ಪ ಸವಾಲ್

Webdunia
ಗುರುವಾರ, 29 ಡಿಸೆಂಬರ್ 2016 (16:36 IST)
ಶೀಘ್ರದಲ್ಲಿಯೇ ರಾಜ್ಯದ ಮೂವರು ಸಚಿವರು ರಾಜೀನಾಮೆ ನೀಡುತ್ತಾರೆ ಎಂದು ಹೇಳಿದ್ದೆ. ನಾನು ಹೇಳಿದ್ದು ನಡೆದರೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡ್ತಾರಾ? ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಬಹಿರಂಗ ಸವಾಲ್ ಎಸೆದಿದ್ದಾರೆ.
ಖಾಸಗಿ ಸುದ್ದಿ ವಾಹಿನಿಯೊಂದಿಗೆ ಮಾತನಾಡಿದ ಅವರು, ರಾಜ್ಯದ ಮೂವರು ಸಚಿವರು ಅತೀ ದೊಡ್ಡ ಹಗರಣಗಳಲ್ಲಿ ಪಾಲ್ಗೊಂಡಿರುವ ಕುರಿತು ಮಾಹಿತಿ ಇದೆ. ಸದ್ಯದಲ್ಲಿಯೇ ಅವರ ಬಣ್ಣ ಬಯಲಾಗಲಿದೆ. ನಾನು ಹೇಳಿದಂತೆ ನಡೆದರೇ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುತ್ತಾರಾ ಎಂದು ಪ್ರಶ್ನಿಸಿದರು.
 
ಕಾಂಗ್ರೆಸ್ ಹೈಕಮಾಂಡ್‌ಗೆ ಕಂತೆ ಕಂತೆ ಹಣ ತಲುಪಿಸುತ್ತಿರುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನದಲ್ಲಿ ಭದ್ರವಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ. 
 
ಸದ್ಯದಲ್ಲಿಯೇ ರಾಜ್ಯ ಸರಕಾರದ ಎಂಎಲ್‌ಸಿ ಹಾಗೂ ಸಚಿವರ ಬಣ್ಣ ಬಯಲಾಗಲಿದೆ. ನಾನು ಭವಿಷ್ಯ ನುಡಿಯುತ್ತಿಲ್ಲ. ಬದಲಿಗೆ ಇನ್ನೆರೆಡು ದಿನ ಕಾದು ನೋಡಿ. ಇದೆಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯರ ಬುಡಕ್ಕೆ ಬರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆಯ ಸಂದೇಶ ರವಾನಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments