Select Your Language

Notifications

webdunia
webdunia
webdunia
webdunia

ನೈತಿಕತೆ ಹೊತ್ತು ಸಿಎಂ ಸ್ಥಾನದಿಂದ ಇಳಿಯದಿದ್ದರೆ ಸತೀಶ್‌ ಸೈಲ್ ಸ್ಥಿತಿಯೇ ಸಿದ್ದರಾಮಯ್ಯರಿಗೆ ಬರಲಿದೆ

MUDA Scam, Chief Minister Siddaramaih, BJP President BY Vijayendra

Sampriya

ಬೆಂಗಳೂರು , ಶುಕ್ರವಾರ, 25 ಅಕ್ಟೋಬರ್ 2024 (15:45 IST)
Photo Courtesy X
ಬೆಂಗಳೂರು: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ತಪ್ಪಿತಸ್ಥರೆಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿರುವ ತೀರ್ಪು ಈ ನೆಲದ ಕಾನೂನು ಅದೆಷ್ಟು ಗಟ್ಟಿಯಾಗಿದೆ ಎನ್ನುವುದನ್ನು ನಿರೂಪಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಅಭಿಪ್ರಾಯ ಹೊರಹಾಕಿದ್ದಾರೆ.

ಈ ಬಗ್ಗೆ  ಅವರು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. ಈ ತೀರ್ಪು ಮುಡಾ, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಗಳಂತಹ ಲೂಟಿಕೋರತನ ಹಾಗೂ ಭ್ರಷ್ಟತೆಯ ಆರೋಪ ಎದುರಿಸುತ್ತಿರುವವರ ಮುಖಕ್ಕೆ ಹಿಡಿದ ಕನ್ನಡಿಯಾಗಿದೆ.

ಅಕ್ರಮ ಅದಿರು ಸಾಗಣೆ ಮಾಡಿ ರಾಜ್ಯದ ಬೊಕ್ಕಸಕ್ಕೆ ₹200 ಕೋಟಿಗೂ ಹೆಚ್ಚಿನ ನಷ್ಟ ಉಂಟು ಮಾಡಿದ ಆರು ಕ್ರಿಮಿನಲ್ ಆರೋಪಗಳಲ್ಲಿ ದೋಷಿಯಾಗಿ ಜೈಲು ಸೇರಿರುವ ಸತೀಶ್ ಸೈಲ್ ಅವರ ವಿರುದ್ಧ ಬಂದಿರುವ ತೀರ್ಪು ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ಆರೋಪಿತರಾಗಿರುವ ಕಾಂಗ್ರೆಸ್ ಸರ್ಕಾರದ ಭ್ರಷ್ಟರೆಲ್ಲರೂ ಸತೀಶ್ ಸೈಲ್ ರವರ ಹಾದಿಯನ್ನು ಹಿಂಬಾಲಿಸಬೇಕಾದ ಸ್ಥಿತಿ ಎದುರಾಗಲಿದೆ ಎಂಬುದರ ಸ್ಪಷ್ಟ ಸೂಚನೆಯಾಗಿದೆ.

ಮುಡಾ ಹಗರಣದ ಕುರಿತು ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ಅನುಮತಿಯನ್ನು ಎತ್ತಿ ಹಿಡಿದಿರುವ ಉಚ್ಛ ನ್ಯಾಯಾಲಯದ ಸುದೀರ್ಘ ತೀರ್ಪಿನಲ್ಲಿ ಹಗರಣದ ಕುರಿತಾದ ಉಲ್ಲೇಖಗಳು ಸ್ಪಷ್ಟವಾಗಿ ನಮೂದಾಗಿವೆ. ಈ ನಿಟ್ಟಿನಲ್ಲಿ ಇಡಿ ಹಾಗೂ ಲೋಕಾಯುಕ್ತದಲ್ಲಿ ತನಿಖೆಯೂ ಸಾಗಿದೆ, ಹೀಗಾಗಿಯೂ ಭಂಡತನ ಮೆರೆದಿರುವ ಮುಖ್ಯಮಂತ್ರಿ @siddaramaiah
 ಅವರು ಶಾಸಕ ಸತೀಶ್ ಸೈಲ್ ವಿರುದ್ಧದ ತೀರ್ಪಿನಿಂದಾದರೂ ಎಚ್ಚೆತ್ತುಕೊಂಡು ನೈತಿಕತೆ ಮೆರೆದರೆ ಭವಿಷ್ಯತ್ತಿನಲ್ಲಿ ಅವರು ಕಿಂಚಿತ್ತಾದರೂ ಗೌರವ ಉಳಿಸಿಕೊಳ್ಳಬಹುದು, ಇಲ್ಲದಿದ್ದರೆ ನ್ಯಾಯಾಲಯವೇ ಅವರಿಗೆ ಹಾದಿ ತೋರುವ ಪರಿಸ್ಥಿತಿ ಉದ್ಭವಿಸುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂಬುದು ಸತೀಶ್ ಸೈಲ್ ಪ್ರಕರಣದ ತೀರ್ಪು ತಿಳಿಸಿಕೊಟ್ಟಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಾಬುಸಾಬ್ ಪಾಳ್ಯ ಕಟ್ಟಡ ಕುಸಿತ ದುರಂತ, ಮತ್ತೋರ್ವನ ಮೃತದೇಹ ಪತ್ತೆ