Select Your Language

Notifications

webdunia
webdunia
webdunia
webdunia

ಒತ್ತಡಕ್ಕೆ ಮಣಿದರೆ ಖುದ್ದು ನಾನೇ ಮದ್ದೂರಿಗೆ ಬರಬೇಕಾಗುತ್ತೆ: ಕೇಂದ್ರ ಸಚಿವ ಎಚ್‌ಡಿಕೆ ವಾರ್ನಿಂಗ್‌

Union Minister HD Kumaraswamy. Maddur riot case, Ganesha procession

Sampriya

ಮಂಡ್ಯ , ಸೋಮವಾರ, 8 ಸೆಪ್ಟಂಬರ್ 2025 (14:23 IST)
ಮಂಡ್ಯ: ಮದ್ದೂರು ಗಲಭೆಗೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಬೇಕು. ಒತ್ತಡಕ್ಕೆ ಮಣಿದರೆ ಖುದ್ದು ನಾನೇ ಮದ್ದೂರಿಗೆ ಬರಬೇಕಾಗುತ್ತೆ ಎಂದು ಕೇಂದ್ರ ಸಚಿವ ಹೆಚ್​​ಡಿ ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ. 

ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ ಸದ್ಯ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಕಲ್ಲು ತೂರಾಟ ಮಾಡಿದ ಕಿಡಿಗೇಡಿಗಳ ವಿರುದ್ಧ ಆಕ್ರೋಶ ಭುಗಿಲೆದಿದ್ದು, ಪ್ರತಿಭಟನೆ ಮಾಡಲಾಗಿದೆ. ಪೊಲೀಸರು ಲಾಠಿ ಚಾರ್ಜ್​ ಕೂಡ ಮಾಡಿದ್ದಾರೆ. ಈ ಮಧ್ಯೆ ಹಕುಮಾರಸ್ವಾಮಿ ಅವರು ಎಸ್​​ಪಿ ಮಲ್ಲಿಕಾರ್ಜುನ ಬಾಲದಂಡಿಗೆ ಕರೆ ಮಾಡಿ ಮಾತುಕತೆ ನಡೆಸಿದ್ದಾರೆ. 

ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಿದ್ದಾರೆಂಬ ಮಾಹಿತಿ ಇದೆ. ಕಳೆದ ವರ್ಷದ ನೆಲಮಂಗಲ ಘಟನೆ ಕೂಡ ನೆನಪಿದೆ. ಮಂಡ್ಯ ಜಿಲ್ಲೆಯಲ್ಲಿ ಮತ್ತೆ ಅಂತಹ ವಾತಾವರಣ ಸೃಷ್ಟಿಯಾಗಿದೆ ಎಂದು ನವದೆಹಲಿಯಲ್ಲಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಹೊರಗಿನಿಂದ ಬಂದವರು ಗಲಭೆ ಮಾಡಿರಬಹುದು: ಮದ್ದೂರು ಘಟನೆಗೆ ಚಲುವರಾಯಸ್ವಾಮಿ ಪ್ರತಿಕ್ರಿಯೆ