Select Your Language

Notifications

webdunia
webdunia
webdunia
webdunia

ನಾನು ಜೈಲಿಗೆ ಬೇಕಾದ್ರೂ ಹೋಗ್ತೀನಿ ಆದ್ರೆ, ಕಾಂಗ್ರೆಸ್ಗೆ ಹೋಗಲ್ಲ: ಮುನಿರತ್ನ

ನಾನು ಜೈಲಿಗೆ ಬೇಕಾದ್ರೂ ಹೋಗ್ತೀನಿ ಆದ್ರೆ, ಕಾಂಗ್ರೆಸ್ಗೆ ಹೋಗಲ್ಲ: ಮುನಿರತ್ನ
ಬೆಂಗಳೂರು , ಬುಧವಾರ, 16 ಆಗಸ್ಟ್ 2023 (12:38 IST)
ಬೆಂಗಳೂರು : ನನ್ನ ಜೈಲಿಗೆ ಹಾಕಿದರೆ ನಾನು ಜೈಲಿಗೆ ಹೋಗುತ್ತೇನೆ. ಆದರೆ ಯಾವುದೇ ಕಾರಣಕ್ಕೂ ಮತ್ತೆ ಕಾಂಗ್ರೆಸ್ಗೆ ಹೋಗಲ್ಲ ಎಂದು ಶಾಸಕ ಮುನಿರತ್ನ ಹೇಳಿದ್ದಾರೆ.

ವೈಯಾಲಿಕಾವಲ್ನ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಆಪರೇಷನ್ ಹಸ್ತದ ಬಗ್ಗೆ ಮಾತನಾಡಿದ ಅವರು, ಐದು ವರ್ಷ ಜೈಲಿನಲ್ಲೇ ಕುಳಿತಿರುತ್ತೇನೆ. ನನ್ನ ಕ್ಷೇತ್ರದ ಅಭಿವೃದ್ಧಿ ಮಾಡಿಕೊಟ್ಟರೆ ಸಾಕು. ಬೇಕಿದ್ದರೆ ರಾಜೀನಾಮೆ ಕೊಡು, ಕ್ಷೇತ್ರದ ಅಭಿವೃದ್ಧಿ ಮಾಡಿಕೊಡ್ತೇವೆ ಎಂದರೆ ರಾಜೀನಾಮೆ ಕೊಡುತ್ತೇನೆ. ಆದರೆ ಕಾಂಗ್ರೆಸ್ಗೆ ಮಾತ್ರ ಸೇರಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

17 ಜನರಲ್ಲಿ ಯಾರು ಕಾಂಗ್ರೆಸ್ಗೆ ಹೋಗ್ತಾರೆ ಅಂತ ನನಗೆ ಗೊತ್ತಿಲ್ಲ. ನಾನಂತೂ ಬಿಜೆಪಿ ಬಿಟ್ಟು ಹೋಗಲ್ಲ. ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆಯೇ ಹೊರತು ಕಾಂಗ್ರೆಸ್ಗೆ ಹೋಗಲ್ಲ. ನನಗೆ ಕಾಂಗ್ರೆಸ್ ಅಗತ್ಯ ಇಲ್ಲ, ನಾನು ಅಲ್ಲಿಗೆ ಹೋಗಲ್ಲ ಎಂದರು.

ಮುನಿರತ್ನ ಭೇಟಿ ಮಾಡಿದ್ರು ಎಂಬ ಡಿಕೆಶಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಡಿಕೆಶಿ ಮನೆಗೆ ಯಾರು ಹೋಗಿದ್ರು?, ಕಳ್ಳತನದಿಂದ ಯಾರಾದ್ರೂ ಹೋಗಿದ್ರಾ?, ಬುರ್ಕಾ ಹಾಕಿಕೊಂಡು ಹೋಗಿದ್ರಾ? ಇದನ್ನ ಹೇಳಲಿ. ಕ್ಷೇತ್ರದ ವಿಚಾರ ಬಗ್ಗೆ ಮಾತಾಡಿದ್ದನ್ನು ರಾಜಕೀಯವಾಗಿ ಡಿಕೆಶಿ ಬಳಸಿಕೊಳ್ಳೋದು ಬೇಡ ಎಂದು ತಿಳಿಸಿದರು.


Share this Story:

Follow Webdunia kannada

ಮುಂದಿನ ಸುದ್ದಿ

ಗೃಹಲಕ್ಷ್ಮಿ ಯೋಜನೆಗೆ 1 ಕೋಟಿಗೂ ಆಧಿಕ ಅರ್ಜಿ ಸಲ್ಲಿಕೆ