ಹಣ ಪಡೆದಿದ್ದೇನೆ ಎಂಬುದು ಸಾಬೀತಾದ್ರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ- ಉಮೇಶ ಜಾಧವ್

Webdunia
ಸೋಮವಾರ, 18 ಫೆಬ್ರವರಿ 2019 (08:34 IST)
ಕಲಬುರಗಿ : ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಶಾಸಕ ಉಮೇಶ ಜಾಧವ್ ಅಪರೇಷನ್ ಕಮಲಕ್ಕೆ ಒಳಗಾಗಿದ್ದಾರೆ ಎಂಬ ಸುದ್ಧಿ ಹರಿದಾಡುತ್ತಿರುವ ಹಿನ್ನಲೆಯಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ ಚಿಂಚೋಳಿ ಕಾಂಗ್ರೆಸ್ ಶಾಸಕ ಉಮೇಶ ಜಾಧವ್  ಅವರು, ‘ನಾನು 50 ಕೋಟಿ ರೂ.ಗೆ ಮಾರಾಟವಾಗಿದೀನಿ ಎನ್ನುವುದು ಸಾಬೀತಾದ್ರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ’ ಎಂದು ಹೇಳಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕರು, ಆಪರೇಷನ್ ಕಮಲಕ್ಕೆ ಒಳಗಾಗಿದ್ದೇವೆಂದು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಿಬಿಡಲಾಗಿದೆ. ಸ್ಪೀಕರ್ ರಮೇಶ್ ಕುಮಾರ್ ಅವರ ಮೇಲೂ ಇಂತಹ ಆರೋಪ ಬಂದಿದೆ. ಹೀಗಾಗಿ ಅಧಿವೇಶನವೇ ಸರಿಯಾಗಿ ನಡೆಯಲಿಲ್ಲ. ಹಣ ಪಡೆದಿದ್ದೇವೆ ಎನ್ನುವ ಆರೋಪದಿಂದಾಗಿ ಮನಸ್ಸಿಗೆ ತುಂಬಾ ನೋವಾಗಿದೆ. ಇದರಿಂದಾಗಿ ಮಾನಸಿಕವಾಗಿ ನೊಂದಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

 

ನಾನು ಈಗ ಕಾಂಗ್ರೆಸ್‍ನಲ್ಲಿ ಇದ್ದೇನೆ ಅಷ್ಟೇ. ಮುಂದೆ ಏನಾಗುತ್ತದೆ ಎನ್ನುವುದು ಗೊತ್ತಿಲ್ಲ. ಕಾಂಗ್ರೆಸ್ ನಾಯಕರು ನೋಟಿಸ್ ನೀಡಿದ್ದಾರೆ. ಅದಕ್ಕೆ ಸದ್ಯದಲ್ಲಿಯೇ ಉತ್ತರ ನೀಡುತ್ತೇನೆ. ನನ್ನನ್ನು ಸಮಾಧಾನಪಡಿಸಲು ಮಂತ್ರಿ ಸ್ಥಾನ ನೀಡುತ್ತೇನೆ ಎನ್ನುತ್ತಾರೆ. ಆದರೆ ನಾನೇ ಬೇಡವೆಂದು ಹೇಳುತ್ತಿರುವೆ. ಆಮಿಷಕ್ಕೆ ಒಳಗಾಗದರೆ ಕ್ಷೇತ್ರದ ಅಭಿವೃದ್ಧಿಯಾಗಲ್ಲ ಎಂದು ಮಂತ್ರಿಗಿರಿ ಆಕಾಂಕ್ಷೆಯನ್ನು ವ್ಯಕ್ತಪಡಿಸಿದರು.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿ ಗುದ್ದಾಟಕ್ಕೆ ಬ್ರೇಕ್ ಬೆನ್ನಲ್ಲೇ ಡಿಕೆ ಸಂಪುಟದಲ್ಲಿ ಮಂತ್ರಿಯಾಗಲ್ಲ ಎಂದ ರಾಜಣ್ಣ

ನಮ್ಮ ಪಕ್ಷಕ್ಕೆ ದುಡ್ಡು ಕೊಡದೇ ಇನ್ಯಾರಿಗೆ ಕೊಡೋಣ: ಡಿ.ಕೆ. ಶಿವಕುಮಾರ್ ಪ್ರಶ್ನೆ

ವಾಚ್ ಬಗ್ಗೆ ಪ್ರಶ್ನಿಸುವವರು ಐಟಿ ಇಲಾಖೆಯಿಂದ ಏಕೆ ತನಿಖೆ ನಡೆಸಬಾರದು

ಪರಪ್ಪನ ಅಗ್ರಹಾರ ಕೈದಿಗಳ ಚಟ ತೀರಿಸಲು ಹೋಗಿ ಅರೆಸ್ಟ್ ಆದ ವಾರ್ಡನ್

Delhi Air Pollution, ರೇಖಾ ಗುಪ್ತಾ ಈ ಬಗ್ಗೆ ಮಹತ್ವದ ಹೇಳಿಕೆ

ಮುಂದಿನ ಸುದ್ದಿ
Show comments