Daily Horoscope

ಇನ್ನೂ ಮಳೆಯಾಗದಿದ್ದರೆ ಹೆಚ್ಚಲಿದೆ ನೀರಿಗೆ ಹಾಹಾಕಾರ

Sampriya
ಶುಕ್ರವಾರ, 26 ಏಪ್ರಿಲ್ 2024 (14:24 IST)
Photo Courtesy X
ಬೆಂಗಳೂರು: ಮಳೆಯ ಅಭಾವ, ಭೀಕರ ಬರ ಮತ್ತು ಬಿಸಿಲಿನ ತೀವ್ರತೆಯಿಂದಾಗಿ ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟವು ಅವುಗಳ ಒಟ್ಟು ಸಂಗ್ರಹ ಸಾಮರ್ಥ್ಯದ ಶೇ 25 ಕ್ಕಿಂತಲೂ ಕಡಿಮೆಯಾಗಿದೆ.  ಇನ್ನೂ ಮಳೆಯಾಗದಿದ್ದರೆ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ನೀರಿಗೆ ಹಾಹಾಕಾರ ಹೆಚ್ಚಲಿದೆ.

ರಾಜ್ಯದ 14 ಪ್ರಮುಖ ಜಲಾಶಯಗಳು ಈಗ 217.75 ಟಿಎಂಸಿ ಅಡಿ ನೀರನ್ನು ಹೊಂದಿವೆ. ಅವುಗಳ ಒಟ್ಟು ಸಂಗ್ರಹ ಸಾಮರ್ಥ್ಯ 895.62 ಟಿಎಂಸಿ ಅಡಿ. ಹಾಗಾಗಿ ಈಗಿನ ಸಂಗ್ರಹ ಒಟ್ಟು ಸಂಗ್ರಹ ಸಾಮರ್ಥ್ಯದ ಶೇ 25ಕ್ಕಿಂತ ಕಡಿಮೆಯಾಗಿದೆ ಎಂದು ಮೂಲಗಳು ತಿಳಿಸಿವೆ.

ಹಿಂದಿನ ಇದೇ ಅವಧಿಯಲ್ಲಿ ರಾಜ್ಯದ ಜಲಾಶಯಗಳಲ್ಲಿ 269 ಟಿಎಂಸಿ ಅಡಿ ನೀರು ಇತ್ತು. ತುಂಗಭದ್ರೆಯಲ್ಲಿ 105.79 ಟಿಎಂಸಿ ಅಡಿ ನೀರು ಸಂಗ್ರಹವಾಗಿದ್ದರೆ 3.77 ಟಿಎಂಸಿ ಅಡಿ ನೀರು ಇದೆ. ಕೆಆರ್​ಎಸ್ ಮತ್ತು ಕಬಿನಿಯಲ್ಲಿ ಕ್ರಮವಾಗಿ 11.74 ಟಿಎಂಸಿ ಅಡಿ ಮತ್ತು 7.72 ಟಿಎಂಸಿ ಅಡಿ ನೀರು ಇದೆ. ಇವುಗಳ ಒಟ್ಟು ಸಂಗ್ರಹ ಸಾಮರ್ಥ್ಯ ಕ್ರಮವಾಗಿ 49.45 ಟಿಎಂಸಿ ಅಡಿ ಮತ್ತು 19.52 ಟಿಎಂಸಿ ಅಡಿ ಆಗಿದೆ.

ಈ ವರ್ಷ ಒಮ್ಮೆ ಮಾತ್ರ ಜಲಾಶಯಗಳು ಭರ್ತಿಯಾಗಿದ್ದವು. ಅಲ್ಲದೆ ರಾಜ್ಯದ ಕಾವೇರಿ ಜಲಾನಯನ ಪ್ರದೇಶದಲ್ಲಿರುವ ಜಲಾಶಯಗಳ ನೀರನ್ನು ತಮಿಳುನಾಡಿಗೆ ಬಿಡಲಾಗಿದೆ. ಈ ಎಲ್ಲಾ ಅಂಶಗಳು ಕರ್ನಾಟಕದ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕಡಿಮೆಯಾಗಲು ಕಾರಣವಾಗಿದೆ.

ಬಿಸಿಲಿನ ಬೇಗೆಯಿಂದ ಆವಿಯಾಗುವಿಕೆಯ ಮೂಲಕವೂ ನೀರು ನಷ್ಟವಾಗುತ್ತದೆ. ಈ ಬಾರಿ ಬಿರು ಬೇಸಿಗೆಯಿಂದಾಗಿ ನಷ್ಟವೇ ಹೆಚ್ಚು. ಕರ್ನಾಟಕವು ಏಪ್ರಿಲ್‌ನಲ್ಲಿ ಸುಮಾರು 50 ಮಿಮೀ ಮಳೆಯನ್ನು ಪಡೆಯುತ್ತದೆ. ಆದರೆ ಆವಿಯಾಗುವಿಕೆಯಿಂದ ದಿನಕ್ಕೆ ಸುಮಾರು 5 ಮಿಮೀ ನಷ್ಟವಾಗುತ್ತದೆ. ಇದರರ್ಥ ತಿಂಗಳಿಗೆ 150 ಮಿಮೀ ನೀರು ನಷ್ಟವಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments