Select Your Language

Notifications

webdunia
webdunia
webdunia
webdunia

ಸಚಿವ ಜಮೀರ್ ಅಹ್ಮದ್‌ರನ್ನು ಗಡಿಪಾರು ಮಾಡಿದ್ರೆ ರಾಜ್ಯಕ್ಕೆ ಒಳಿತು: ಬಿವೈ ವಿಜಯೇಂದ್ರ

BJP President BY Vijayendra, Waqf Board, Minister Zameer Ahmad

Sampriya

ಚಿತ್ರದುರ್ಗ , ಭಾನುವಾರ, 3 ನವೆಂಬರ್ 2024 (11:58 IST)
ಚಿತ್ರದುರ್ಗ: ಶಾಂತಿಯುತ ರಾಜ್ಯದಲ್ಲಿ ಸಚಿವ ಜಮೀರ್ ಅಹ್ಮದ್ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಜಮೀರ್ ಅವರನ್ನು ಗಡಿಪಾರು ಮಾಡಿದ್ರೆ ರಾಜ್ಯಕ್ಕೆ ಒಳಿತು. ಅಹಿಂದ ಹೆಸರು ಹೇಳಿ ಅಹಿಂದ ಸಮುದಾಯಕ್ಕೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ  ಹೇಳಿದ್ದಾರೆ.

ಚಿತ್ರದುರ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿಂದೂಗಳ ಆಸ್ತಿ, ರೈತರ ಜಮೀನು, ಮಠ ಮಾನ್ಯಗಳ ಆಸ್ತಿ ಕಬಳಿಸುವ ಕೆಲಸ ಆಗುತ್ತಿದೆ. ಆದ್ರೆ ಸಿಎಂ ಸಿದ್ಧರಾಮಯ್ಯ ಮೊಸಳೆ ಕಣ್ಣೀರು ಹಾಕ್ತಿದ್ದಾರೆ. ರೈತರಿಗೆ ನೀಡಿದ ನೋಟಿಸ್ ಹಿಂಪಡೆಯುವುದಾಗಿ ಹೇಳಿದ್ದಾರೆ. ಅವರಿಗೆ ತಾಕತ್ತಿದ್ದರೆ ಗೆಜೆಟ್ ನೋಟಿಫಿಕೇಷನ್ ಹಿಂಪಡೆಯಲಿ ಎಂದು ಸವಾಲ್‌  ಎಸೆದರು.

ರಾಜ್ಯಾದ್ಯಂತ ಪ್ರವಾಸ ಮಾಡಿ ಅಧಿಕಾರಿಗಳ ಮೇಲೆ ದಬ್ಬಾಳಿಕೆ ನಡೆಯುತ್ತಿದೆ. ಗೂಂಡಾಗಿರಿ ಮಾಡಿ, ರೈತರ ಜಮೀನು, ಮಠಮಾನ್ಯಗಳ ಆಸ್ತಿ ಕಬಳಿಕೆ ಮಾಡಲಾಗುತ್ತಿದೆ. ವಕ್ಫ್ ಮೂಲಕ ಸಚಿವ ಜಮೀರ್ ಅಹ್ಮದ್ ಭೂಕಬಳಿಕೆ ಕೆಲಸ ಮಾಡ್ತಿದ್ದಾರೆ. ಜಮೀರ್ ಅವರನ್ನು ಗಡಿಪಾರು ಮಾಡಿದ್ರೆ ರಾಜ್ಯಕ್ಕೆ ಒಳಿತಾಗುತ್ತೆ ಎಂದರು.

ರಾಜ್ಯ ಸರ್ಕಾರದ ಆಡಳಿತ ಬಗ್ಗೆ ಮಾತನಾಡಿದ ಅವರು,  ಸಿಎಂ ಯಾವುದೇ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ನೀಡಿಲ್ಲ. ಮತ್ತೊಂದು ಕಡೆ ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ. ಆಡಳಿತ ಪಕ್ಷದ ಶಾಸಕರೇ ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಕನ್ನಡ ತಪ್ಪಾಗಿ ಓದಿದ ಶಿಕ್ಷಣ ಸಚಿವರಿಗೆ ಸ್ಪೆಷಲ್ ಕ್ಲಾಸ್‌ ಸಿಎಂಗೆ ಬಿಜೆಪಿ ಒತ್ತಾಯ