Webdunia - Bharat's app for daily news and videos

Install App

ಸಚಿವ ಜಮೀರ್ ಅಹ್ಮದ್‌ರನ್ನು ಗಡಿಪಾರು ಮಾಡಿದ್ರೆ ರಾಜ್ಯಕ್ಕೆ ಒಳಿತು: ಬಿವೈ ವಿಜಯೇಂದ್ರ

Sampriya
ಭಾನುವಾರ, 3 ನವೆಂಬರ್ 2024 (11:58 IST)
ಚಿತ್ರದುರ್ಗ: ಶಾಂತಿಯುತ ರಾಜ್ಯದಲ್ಲಿ ಸಚಿವ ಜಮೀರ್ ಅಹ್ಮದ್ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಜಮೀರ್ ಅವರನ್ನು ಗಡಿಪಾರು ಮಾಡಿದ್ರೆ ರಾಜ್ಯಕ್ಕೆ ಒಳಿತು. ಅಹಿಂದ ಹೆಸರು ಹೇಳಿ ಅಹಿಂದ ಸಮುದಾಯಕ್ಕೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ  ಹೇಳಿದ್ದಾರೆ.

ಚಿತ್ರದುರ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿಂದೂಗಳ ಆಸ್ತಿ, ರೈತರ ಜಮೀನು, ಮಠ ಮಾನ್ಯಗಳ ಆಸ್ತಿ ಕಬಳಿಸುವ ಕೆಲಸ ಆಗುತ್ತಿದೆ. ಆದ್ರೆ ಸಿಎಂ ಸಿದ್ಧರಾಮಯ್ಯ ಮೊಸಳೆ ಕಣ್ಣೀರು ಹಾಕ್ತಿದ್ದಾರೆ. ರೈತರಿಗೆ ನೀಡಿದ ನೋಟಿಸ್ ಹಿಂಪಡೆಯುವುದಾಗಿ ಹೇಳಿದ್ದಾರೆ. ಅವರಿಗೆ ತಾಕತ್ತಿದ್ದರೆ ಗೆಜೆಟ್ ನೋಟಿಫಿಕೇಷನ್ ಹಿಂಪಡೆಯಲಿ ಎಂದು ಸವಾಲ್‌  ಎಸೆದರು.

ರಾಜ್ಯಾದ್ಯಂತ ಪ್ರವಾಸ ಮಾಡಿ ಅಧಿಕಾರಿಗಳ ಮೇಲೆ ದಬ್ಬಾಳಿಕೆ ನಡೆಯುತ್ತಿದೆ. ಗೂಂಡಾಗಿರಿ ಮಾಡಿ, ರೈತರ ಜಮೀನು, ಮಠಮಾನ್ಯಗಳ ಆಸ್ತಿ ಕಬಳಿಕೆ ಮಾಡಲಾಗುತ್ತಿದೆ. ವಕ್ಫ್ ಮೂಲಕ ಸಚಿವ ಜಮೀರ್ ಅಹ್ಮದ್ ಭೂಕಬಳಿಕೆ ಕೆಲಸ ಮಾಡ್ತಿದ್ದಾರೆ. ಜಮೀರ್ ಅವರನ್ನು ಗಡಿಪಾರು ಮಾಡಿದ್ರೆ ರಾಜ್ಯಕ್ಕೆ ಒಳಿತಾಗುತ್ತೆ ಎಂದರು.

ರಾಜ್ಯ ಸರ್ಕಾರದ ಆಡಳಿತ ಬಗ್ಗೆ ಮಾತನಾಡಿದ ಅವರು,  ಸಿಎಂ ಯಾವುದೇ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ನೀಡಿಲ್ಲ. ಮತ್ತೊಂದು ಕಡೆ ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ. ಆಡಳಿತ ಪಕ್ಷದ ಶಾಸಕರೇ ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ಹೇಳಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments