Select Your Language

Notifications

webdunia
webdunia
webdunia
webdunia

ಮಾಸ್ಕ್ ಧರಿಸದೇ ಇದ್ದರೆ ದಂಡ ಪ್ರಯೋಗ

If not wearing a mask
bangalore , ಗುರುವಾರ, 30 ಜೂನ್ 2022 (20:35 IST)
ರಾಜಧಾನಿಯಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ನಿಯಂತ್ರಣಕ್ಕೆ ಸರ್ಕಾರ ಸಾರ್ವಜನಿಕರ ಮೇಲೆ ದಂಡದ ಅಸ್ತ್ರ ಪ್ರಯೋಗಿಸಲು ಸಿದ್ಧತೆ ನಡೆಸಿದೆ. ಮಾಸ್ಕ್ ಧರಿಸದೇ ಸಾರ್ವಜನಿಕ ಸ್ಥಳದಲ್ಲಿ ಓಡಾಡುವವರ ವಿರುದ್ಧ ದಂಡ ವಿಧಿಸಲು ಸರ್ಕಾರ ನಿರ್ಧರಿಸಿದೆ. ದಂಡ ಪ್ರಯೋಗಕ್ಕೆ ಅನುಮತಿ ನೀಡುವಂತೆ ಆರೋಗ್ಯ ಇಲಾಖೆ ಸರ್ಕಾರದ ಮುಂದೆ ಪ್ರಸ್ತಾವನೆ ಇರಿಸಿದೆ. ಬೆಂಗಳೂರು ನಗರದಲ್ಲಿ ಮಾತ್ರ ದಂಡ ಪ್ರಯೋಗಕ್ಕೆ ಅನುಮತಿ ನೀಡುವಂತೆ ಕೋರಲಾಗಿದೆ. ಕೋವಿಡ್ ಪ್ರಕರಣಗಳ ಹೆಚ್ಚಳದ ಬಗ್ಗೆ ಎಷ್ಟೇ ಜಾಗೃತಿಗೊಳಿಸಿದರೂ ಜನ ಮಾಸ್ಕ್ ಹಾಕುತ್ತಿಲ್ಲ. ಹೀಗಾಗಿ ದಂಡ ಪ್ರಯೋಗಕ್ಕೆ ತಾಂತ್ರಿಕ ಸಲಹಾ ಸಮಿತಿ ಶಿಫಾರಸು ಮಾಡಿತ್ತು. ಸಲಹಾ ಸಮಿತಿಯ ಶಿಫಾರಸನ್ನು ಆರೋಗ್ಯ ಇಲಾಖೆ ಈಗ ಸರ್ಕಾರದ ಮುಂದಿಟ್ಟಿದೆ. ಶೀಘ್ರದಲ್ಲೆ ದಂಡ ಪ್ರಯೋಗಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ಕೊಡುವ ಸಾಧ್ಯತೆಯಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸುರಂಗ ಕೊರೆದು ಹೊರ ಬಂದ ಊರ್ಜಾ