Webdunia - Bharat's app for daily news and videos

Install App

ವಕ್ಫ್‌ ಹೆಸರಿನಲ್ಲಿ ದಬ್ಬಾಳಿಕೆ ನಿಲ್ಲದಿದ್ದರೆ ಕರ್ನಾಟಕದಲ್ಲೂ ಕಾಂಗ್ರೆಸ್ ಧೂಳೀಪಟ: ಆರ್‌ ಅಶೋಕ್ ಆಕ್ರೋಶ

Sampriya
ಸೋಮವಾರ, 25 ನವೆಂಬರ್ 2024 (19:41 IST)
ಬೆಂಗಳೂರು: ವಕ್ಫ್ ಹೆಸರಿನಲ್ಲಿ ನಡೆಯುತ್ತಿರುವ ದಬ್ಬಾಳಿಕೆ ನಿಲ್ಲಿದಿದ್ದರೆ ಹಿಂದೂಗಳ ಕೆಂಗಣ್ಣಿಗೆ ಗುರಿಯಾಗಿ ಮಹಾರಾಷ್ಟ್ರ, ಹರಿಯಾಣ ರಾಜ್ಯಗಳಲ್ಲಿ ಆದಂತೆ ಕರ್ನಾಟಕದಲ್ಲೂ ಕಾಂಗ್ರೆಸ್ ಪಕ್ಷ ಧೂಳೀಪಟ ಆಗುವುದು ನಿಶ್ಚಿತ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ ಕಿಡಿಕಾರಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ 'ಎಕ್ಸ್‌'ನಲ್ಲಿ ಪೋಸ್ಟ್‌ ಮಾಡಿರುವ ಅವರು, ವಕ್ಫ್ ವಿಚಾರದಲ್ಲಿ ದಿನಕ್ಕೊಂದು ನಾಟಕ, ಕ್ಷಣಕ್ಕೊಂದು ಸುಳ್ಳು ಹೇಳುತ್ತಲೇ ಬರುತ್ತಿರುವ ಕಾಂಗ್ರೆಸ್ ಸರ್ಕಾರ ಈಗ ಮತ್ತೊಮ್ಮೆ ಜನರ ದಿಕ್ಕು ತಪ್ಪಿಸುವ ಪ್ರಯತ್ನ ಮಾಡುತ್ತಿದೆ.

ಸಿಎಂ ಸಿದ್ದರಾಮಯ್ಯ ನವರೇ, ವಕ್ಫ್ ವಿಚಾರ ಮೊದಲ ಪ್ರಸ್ತಾಪವಾದಾಗ ಸರ್ಕಾರ ಯಾರಿಗೂ ನೋಟೀಸು ಕಳಿಸುತ್ತಲೇ ಇಲ್ಲ ಎಂದು ಸುಳ್ಳು ಹೇಳಿದಿರಿ.

ನಂತರ ವಿಜಯಪುರ ಜಿಲ್ಲೆಯಲ್ಲಿ ರೈತರು ಸಿಡಿದ್ದೆದ್ದಾಗ, ನೋಟಿಸು ವಾಪಸ್ಸು ಪಡೆದು, ಈ ಪ್ರಕ್ರಿಯೆ ನಿಲ್ಲಿಸುತ್ತೇವೆ ಎಂದು ಮತ್ತೊಂದು ಸುಳ್ಳು ಹೇಳಿದಿರಿ.

ಆದರೆ ರೈತರಿಗೆ, ಮಠ-ಮಂದಿರಗಳಿಗೆ ಕಳಿಸುವುದು, ರಾತ್ರೋರಾತ್ರಿ ತರಾತುರಿಯಲ್ಲಿ ಭೂದಾಖಲೆಗಳನ್ನು ತಿದ್ದುವುದು ಮಾತ್ರ ನಿಲ್ಲಲೇ ಇಲ್ಲ. ಮೇಲಾಗಿ ಸಚಿವ ಜಮರ್ ಅಹ್ಮದ್ ಖಾನ್ ಅವರು ಇದೆಲ್ಲಾ ಮುಖ್ಯಮಂತ್ರಿಗಳ ಸೂಚನೆಯ ಮೇರೆಗೆ ನಡೆಯುತ್ತಿದೆ ಎಂದು ಹೇಳುವ ವಿಡಿಯೋ ಬಹಿರಂಗ ಆದಮೇಲೆ ತಮ್ಮ ಸುಳ್ಳು ಸಂಪೂರ್ಣ ಬಯಲಾಯಿತು.

ಗುತ್ತಿಗೆ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವ ಪ್ರಸ್ತಾವನೆಯೇ ಸರ್ಕಾರದ ಮುಂದಿಲ್ಲ ಎಂದು ಸತ್ಯದ ತಲೆಯ ಮೇಲೆ ಹೊಡೆದ ಹಾಗೆ ಮತ್ತೊಂದು ಸುಳ್ಳು ಹೇಳಿದಿರಿ. ಆದರೆ ಗುತ್ತಿಗೆ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ 4% ಮೀಸಲಾತಿ ಕೊಡಬೇಕು ಎಂದು ತಮ್ಮ ರಾಜಕೀಯ ಕಾರ್ಯದರ್ಶಿ ನಾಸೀರ್ ಅಹ್ಮದ್, ಸಚಿವ ಜಮೀರ್ ಅಹ್ಮದ್ ಖಾನ್ ಸೇರಿದಂತೆ ಮುಸ್ಲಿಂ ಶಾಸಕರು ಆಗಸ್ಟ್ 24, 2024 ರಂದು ತಮಗೆ ಪತ್ರ ಬರೆಯುತ್ತಾರೆ. ತಾವು ಅದೇ ದಿನವೇ ಈ ಪತ್ರವನ್ನ ಪರಿಶೀಲಿಸಿ ಮಂಡಿಸಿ ಎಂದು ಆರ್ಥಿಕ ಇಲಾಖೆಗೆ ನಿರ್ದೇಶನ ನೀಡಿದ್ದೀರಿ. ಈ ಸಂಬಂಧ ಕೆಟಿಪಿಪಿ ಕಾಯ್ದೆಗೆ ತಿದ್ದುಪಡಿ ತರಲೂ ಸಹ ತಾವು ಅನುಮೋದನೆ ನೀಡಿದ್ದೀರಿ.

ಈಗ ವಕ್ಫ್ ವಿಚಾರದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲೇ ಅತಿಹೆಚ್ಚು ನೋಟಿಸುಗಳು ನೀಡಲಾಗಿದೆ ಎಂದು ಮತ್ತೊಂದು ದಿಕ್ಕು ತಪ್ಪಿಸುವ ಪ್ರಯತ್ನ ಮಾಡುತ್ತಿದ್ದೀರಿ. ಓಲೈಕೆ ರಾಜಕಾರಣಕ್ಕೆ ಇನ್ನೆಷ್ಟು ಸುಳ್ಳು ಹೇಳುತ್ತೀರಿ?

ಕಾಂಗ್ರೆಸ್ ಪಕ್ಷದ ಅನೇಕ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಪ್ರಭಾವಿ ಮುಖಂಡರು ಬಡವರಿಗೆ ಸೇರಿದ ಸಾವಿರಾರು ಎಕರೆ ವಕ್ಫ್ ಭೂಮಿಯನ್ನ ಕಬಳಿಸಿದ್ದಾರೆ ಎಂಬ ವರದಿ ನಮ್ಮ ಸರ್ಕಾರಕ್ಕೆ ಬಂದಿತ್ತು. ಆಗ ಆ ವರದಿಯ ಆಧಾರದ ಮೇಲೆ ತನಿಖೆ ಮಾಡಲು ಸಂಬಂಧಪಟ್ಟವರಿಗೆ ನೋಟಿಸುಗಳನ್ನು ನೀಡಲಾಗಿತ್ತೇ ಹೊರತು ಇದರ ಹಿಂದೆ ಯಾವುದೇ ಕುತಂತ್ರ, ಷಡ್ಯಂತ್ರ ಇರಲಿಲ್ಲ.

ಇಷ್ಟಕ್ಕೂ ಬಿಜೆಪಿ ಸರ್ಕಾರ ಬಡ ರೈತರು ತಲೆತಲಾಂತರಗಳಿಂದ ಉಳುಮೆ ಮಾಡಿಕೊಂಡು ಬಂದಿರುವ ಕೃಷಿ ಜಮೀನುಗಳಿಗೆ, ಗೋಮಾಳಗಳಿಗೆ, ಸ್ಮಶಾನಗಳಿಗೆ, ನೂರಾರು ವರ್ಷ ಇತಿಹಾಸ ಇರುವ ಸರ್ಕಾರಿ ಶಾಲೆಗಳಿಗೆ, ದೇವಸ್ಥಾನಗಳಿಗೆ, ಮಠ-ಮಾನ್ಯಗಳಿಗೆ, ಪಾರಂಪರಿಕ ತಾಣಗಳಿಗೆ, ಜನಸಾಮಾನ್ಯರ ಆಸ್ತಿ-ಪಾಸ್ತಿಗಳಿಗೆ, ಮಾಜಿ ಶಾಸಕರ ಮನೆಗಳಿಗೆ ನೋಟಿಸು ಕಳಿಸಿಲ್ಲ. ಬಡವರ ಭೂಮಿ ನುಂಗಿರುವ ದೊಡ್ಡ ದೊಡ್ಡ ತಿಮಿಂಗಿಲಗಳನ್ನು ಹಿಡಿಯುವ ಉದ್ದೇಶದಿಂದ ನೋಟಿಸು ಕೊಟ್ಟಿತ್ತು. ಇಷ್ಟಕ್ಕೂ ಈಗ ತಮ್ಮದೇ ಸರ್ಕಾರ ಇದೆ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೊಟ್ಟ ನೋಟಿಸುಗಳಲ್ಲಿ ಏನಾದರೂ ತಪ್ಪಿದ್ದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಿ.

ವಕ್ಫ್ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರದ ಓಲೈಕೆ ರಾಜಕಾರಣ ಜನರಿಗೆ ಸ್ಪಷ್ಟವಾಗಿ ಅರ್ಥವಾಗಿದೆ. ಕೇಂದ್ರ ಸರ್ಕಾರ ವಕ್ಫ್ ಕಾಯ್ದೆಗೆ ತರಲು ಉದ್ದೇಶಿಸಿರುವ ತಿದ್ದುಪಡಿಗೆ ಮೊದಲು ಹೇಗಾದರೂ ಮಾಡಿ ಜಮೀನು ಕಬಳಿಸಬೇಕು ಎಂಬ ಕಾಂಗ್ರೆಸ್ ಪಕ್ಷದ ಷಡ್ಯಂತ್ರ, ಕುತಂತ್ರ ಬಹುಸಂಖ್ಯಾತ ಹಿಂದೂಗಳಿಗೆ ಬಹಳ ಸ್ಪಷ್ಟವಾಗಿ ಮನವರಿಕೆಯಾಗಿದೆ.

ಈಗ ಮತ್ತೊಂದು ಸುಳ್ಳು ಹೇಳಿ ಜನರ ದಿಕ್ಕು ತಪ್ಪಿಸುವ ಪ್ರಯತ್ನ ಬಿಡಿ. ವಕ್ಫ್ ಹೆಸರಿನಲ್ಲಿ ನಡೆಯುತ್ತಿರುವ ದಬ್ಬಾಳಿಕೆ ನಿಲ್ಲಿಸಿ. ಇಲ್ಲದಿದ್ದರೆ ಕಾಂಗ್ರೆಸ್ ಪಕ್ಷ ಹಿಂದೂಗಳ ಕೆಂಗಣ್ಣಿಗೆ ಗುರಿಯಾಗಿ ಮಹಾರಾಷ್ಟ್ರ, ಹರಿಯಾಣ ರಾಜ್ಯಗಳಲ್ಲಿ ಆದಂತೆ ಕರ್ನಾಟಕದಲ್ಲೂ ಧೂಳೀಪಟ ಆಗುವುದು ನಿಶ್ಚಿತ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments