Webdunia - Bharat's app for daily news and videos

Install App

ಶಿವಮೊಗ್ಗದಿಂದ ಟಿಕೆಟ್ ಕೊಟ್ರೆ ಸ್ಪರ್ಧಿಸುತ್ತೇನೆ,: ಕೆ.ಎಸ್.ಈಶ್ವರಪ್ಪ

Webdunia
ಬುಧವಾರ, 16 ಆಗಸ್ಟ್ 2017 (17:40 IST)
ಶಿವಮೊಗ್ಗದಿಂದ ಬಿಜೆಪಿ ಟಿಕೆಟ್ ಕೊಟ್ರೆ ಸ್ಪರ್ಧಿಸುತ್ತೇನೆ. ಇಲ್ಲವಾದಲ್ಲಿ ಪಕ್ಷದ ಕಾರ್ಯಕರ್ತನಾಗಿ ಸೇವೆ ಸಲ್ಲಿಸುತ್ತೇನೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳ ಟಿಕೆಟ್ ಹಂಚಿಕೆಯನ್ನು ರಾಜ್ಯನಾಯಕರಿಗೆ ವಹಿಸುತ್ತಿಲ್ಲ. ಪಕ್ಷದ ಹೈಕಮಾಂಡ್ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ತಿಳಿಸಿದ್ದಾರೆ.
 
ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ನಿವಾಸಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದಾಗ 300 ರಿಂದ 400 ಕೋಟಿ ರೂಪಾಯಿಗಳಿಗೂ ಹೆಚ್ಚಿನ ಸಂಪತ್ತು ಪತ್ತೆಯಾಗಿದೆ. ಡಿಕೆಶಿ ಕೂಡಲೇ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸಲಿ ಎಂದು ಸವಾಲು ಹಾಕಿದರು.
 
ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ಡಿಕೆಶಿಯನ್ನು ಸಮರ್ಥಿಸಿಕೊಳ್ಳುತ್ತಿರುವುದು ಸರಿಯಲ್ಲ. ಮೊದ್ಲು ಡಿಕೆಶಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿ. ತಪ್ಪಿತಸ್ಥರಲ್ಲ ಎಂದು ಸಾಬೀತಾದಲ್ಲಿ ಮತ್ತೆ ಸಚಿವ ಸ್ಥಾನದಲ್ಲಿ ಮುಂದುವರೆಯಲಿ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ತರಾಟೆಗೆ ತೆಗೆದುಕೊಂಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments