ಚಿಕ್ಕಬಳ್ಳಾಪುರ ಜಿಲ್ಲೆ ದಿಬ್ಬೂರಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಝೀಕಾ ವೈರಸ್ ಪತ್ತೆಯಾದ ಬೆನ್ನಲ್ಲೇ ಆರೋಗ್ಯ ಇಲಾಖೆಯು ಕಟ್ಟೆಚ್ಚರ ವಹಿಸಿದ್ದು, ಝೀಕಾ ವೈರಸ್ ಹರಡುವುದನ್ನು ನಿಯಂತ್ರಿಸಲು ಮಾರ್ಗಸೂಚಿ ಪ್ರಕಟ ಮಾಡಿದೆ.
ಈವರೆಗೆ ಯಾವುದೇ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿಲ್ಲ. ಹೀಗಿದ್ದರೂ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಅಗತ್ಯ ಕ್ರಮಗಳಿಗಾಗಿ ಮಾರ್ಗಸೂಚಿಯನ್ನು ಸರ್ಕಾರ ರವಾನಿಸಿದೆ.