Select Your Language

Notifications

webdunia
webdunia
webdunia
webdunia

ಎಸ್.ಎಂ.ಕೃಷ್ಣ ಬಿಜೆಪಿಗೆ ಬಂದ್ರೆ ಸ್ವಾಗತಿಸುತ್ತೇವೆ

ಎಸ್.ಎಂ.ಕೃಷ್ಣ ಬಿಜೆಪಿಗೆ ಬಂದ್ರೆ ಸ್ವಾಗತಿಸುತ್ತೇವೆ
ಮಡಿಕೇರಿ , ಭಾನುವಾರ, 29 ಜನವರಿ 2017 (14:15 IST)
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಬಿಜೆಪಿಗೆ ಬಂದ್ರೆ ಸ್ವಾಗತಿಸುತ್ತೇವೆ ಎಂದು ಕೇಂದ್ರ ಸಚಿವ ಸದಾನಂದಗೌಡ ತಿಳಿಸಿದ್ದಾರೆ.
 
ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್.ಎಂ.ಕೃಷ್ಣ ಅವರದ್ದು ಬಿಜೆಪಿಗೆ ಸೂಟ್ ಆಗುವಂತಹ ವ್ಯಕ್ತಿತ್ವ. ಅವರು ಬಿಜೆಪಿ ಬಂದರೆ ಪಕ್ಷದ ಶಕ್ತಿ ಅಧಿಕವಾಗುತ್ತದೆ. ಕೃಷ್ಣರಂತ ಸರಳ, ಸಜ್ಜನ ವ್ಯಕ್ತಿಗಳು ಪಕ್ಷಕ್ಕೆ ಬೇಕು ಎಂದು ಅಭಿಪ್ರಾಯಪಟ್ಟರು.  
 
ಸಿಎಂ ಸಿದ್ದರಾಮಯ್ಯ ಹಾಗೂ ಮತ್ತಿತ್ತರ ಮುಖಂಡರ ನಡವಳಿಗೆಯ ವಿರುದ್ಧ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅಸಮಧಾನಗೊಂಡಿದ್ದರು. ಹೀಗಾಗಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ ಅವರು, ರಾಜಕೀಯ ಚಟುವಟಿಕೆಗಳಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ.
 
ತಮ್ಮ ಹಿರಿತನವನ್ನು ನಿರ್ಲಕ್ಷಿಸಿದ ಹಿನ್ನೆಲೆಯಲ್ಲಿ ಬೇಸರಕೊಂಡಿದ್ದ ಎಸ್.ಎಂ.ಕೃಷ್ಣ ಅವರು, ನಿನ್ನೆ ಮುಂಜಾನೆ 11 ಗಂಟೆಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಕಂಬಳಕ್ಕಾಗಿ ಜೈಲಿಗೆ ಹೋಗಲು ಸಿದ್ಧ: ವಾಟಾಳ್ ನಾಗರಾಜ್