Select Your Language

Notifications

webdunia
webdunia
webdunia
webdunia

ಎಸ್.ಎಂ.ಕೃಷ್ಣ ಬಿಜೆಪಿಗೆ ಬಂದರೆ ಆನೆ ಬಲ ಬಂದಂತೆ: ಬಿ.ಎಸ್.ಯಡಿಯೂರಪ್ಪ

ಎಸ್.ಎಂ.ಕೃಷ್ಣ
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಮುತ್ಸದ್ದಿ ರಾಜಕಾರಣಿಯಾಗಿದ್ದಾರೆ. ಅವರು ಬಿಜೆಪಿಗೆ ಬಂದರೆ ಪಕ್ಷಕ್ಕೆ ದೊಡ್ಡ ಶಕ್ತಿ ಬಂದಂತೆ ಆಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅಭಿಪ್ರಾಯಪಟ್ಟಿದ್ದಾರೆ.
 
ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೃಷ್ಣ ಅವರ ಮನಸ್ಸಿನಲ್ಲಿ ಏನಿದೆ ಗೊತ್ತಿಲ್ಲ. ಅವರು ಸಮಯ ನೀಡಿದರೆ ಭೇಟಿಯಾಗಿ ಚರ್ಚಿಸುತ್ತೇನೆ. ನೇರವಾಗಿ ನಾನೇ ಮಾತನಾಡೋದು ತಪ್ಪಾಗುತ್ತದೆ ಎಂದರು. 
 
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಬಿಜೆಪಿ ಪಕ್ಷ ಸೇರುತ್ತಾರೆ ಎಂದು ಸುದ್ದಿಗಳು ಹರಡಿದ್ದು, ಅವರ ಮುಂದಿನ ನಡೆ ಕುರಿತು ರಾಜ್ಯ ರಾಜಕೀಯ ವಲಯದಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ. 
 
ಸಿಎಂ ಸಿದ್ದರಾಮಯ್ಯ ಹಾಗೂ ಮತ್ತಿತ್ತರ ಮುಖಂಡರ ನಡವಳಿಗೆಯ ವಿರುದ್ಧ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅಸಮಧಾನಗೊಂಡಿದ್ದರು. ಹೀಗಾಗಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ ಅವರು, ರಾಜಕೀಯ ಚಟುವಟಿಕೆಗಳಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಮಹಾತ್ಮ ಗಾಂಧಿ ಪುಣ್ಯತಿಥಿ: ಗೌರವ ನಮನ ಸಲ್ಲಿಸಿದ ಮೋದಿ