Publish Date: Tue, 26 Dec 2023 (17:00 IST)
Updated Date: Tue, 26 Dec 2023 (17:26 IST)
ಸಂಸದ ಪ್ರತಾಪ್ ಸಿಂಹ ಸಹೋದರನ ಮೇಲೆ ನೂರಾರು ಮರ ಕಡಿದ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಸ್ಪಷ್ಟನೆ ನೀಡಿದ ಪ್ರತಾಪ್ ಸಿಂಹ. ದೆಹಲಿ ಸಂಸತ್ ಘಟನೆ ನಂತರ ಕಾಂಗ್ರೆಸ್ ನನ್ನ ಮೇಲೆ ವೈಯಕ್ತಿಕ ದಾಳಿ ಜಾಸ್ತಿ ಮಾಡಿದೆ. ಕಾರ್ಯಕರ್ತನಿಂದ ಹಿಡಿದು ಸಿಎಂ ಪುತ್ರನ ವರೆಗೂ ಎಲ್ಲರೂ ನನ್ನ ಟಾರ್ಗೆಟ್ ಮಾಡಿದ್ದಾರೆ. ಸಿದ್ದರಾಮಯ್ಯಗೆ ಧಮ್, ತಾಕತ್ ಇದ್ರೆ ಅಭಿವೃದ್ಧಿ ರಾಜಕಾರಣ ಮಾಡಲಿ, ನನ್ನ ಮೇಲೆ ವೈಯಕ್ತಿಕ ದಾಳಿ ಮಾಡಬೇಡಿ ಅಂತಾ ವಾಗ್ದಾಳಿ ಮಾಡಿದ್ದಾರೆ.