Publish Date: Wed, 24 Jan 2018 (20:13 IST)
Updated Date: Wed, 24 Jan 2018 (20:15 IST)
ಬಿಜೆಪಿ ಪಕ್ಷದವರು ಬೀಗತನ ಮಾಡಲು ಜೈಲಿಗೆ ಹೋಗಿದ್ದರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರದಿಂದ ಹಣ ಕೊಟ್ಟಿರುವ ಬಗ್ಗೆ ಮಾತನಾಡು ಯಡಿಯೂರಪ್ಪ ಅವರು ಕಾನೂನು ತಿಳಿದುಕೊಳ್ಳಬೇಕು. ಕೇಂದ್ರದಲ್ಲಿ ಯಾವುದೇ ಸರ್ಕಾರವಿದ್ದರೂ ರಾಜ್ಯಕ್ಕೆ ಅನುದಾನ ನೀಡಬೇಕು. ಈ ರೀತಿ ಮಾತನಾಡಲು ಬಿಜೆಪಿಯವರಿಗೆ ನಾಚಿಕೆಯಾಗಬೇಕು ಎಂದಿದ್ದಾರೆ.
ಶ್ರೀನಿವಾಸ ಪ್ರಸಾದ್ ಅವರ ಕೀಳುಮಟ್ಟದ ರಾಜಕಾರಣಕ್ಕೆ ಪ್ರತಿಕ್ರಿಯೆ ನೀಡಲ್ಲ. ಪ್ರಕಾಶ ಜಾವಡೇಕರ್ ಅವರು ಭವಿಷ್ಯ ನುಡಿಯುತ್ತಾರೆಯೇ, ಅವರಿಗೆ ಕರ್ನಾಟಕದ ಬಗ್ಗೆ ಏನು ಗೊತ್ತು ಎಂದು ಪ್ರಶ್ನಿಸಿದ ಅವರು, ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.