ಬಾರ್, ಹೋಟೆಲ್ ಇಲ್ಲವೇ ಪಬ್ ಗಳಲ್ಲಿ ಇನ್ಮುಂದೆ ಸಿಗರೇಟ್ ಸೇರಿದರೆ ಅಥವಾ ಧೂಮಪಾನಕ್ಕೆ ಅವಕಾಶ ನೀಡಿದರೆ ಲೈಸನ್ಸನ್ನೇ ರದ್ದುಗೊಳಿಸುತ್ತೇವೆ. ಹೀಗಂತ ಸಚಿವರು ಖಡಕ್ ಎಚ್ಚರಿಕೆ ನೀಡಿದ್ದಾರೆ.
ರಾಜ್ಯದಲ್ಲಿ ಇನ್ನು ಮುಂದೆ ಯಾವುದೇ ಬಾರ್, ಪಬ್, ಕ್ಲಬ್ ಹಾಗೂ ಹೋಟೆಲ್ಗಳಲ್ಲಿ ಧೂಮಪಾನಕ್ಕೆ ಅವಕಾಶ ನೀಡಿದರೆ ಅಂತಹ ಕ್ಲಬ್, ಹೋಟೆಲ್, ಬಾರ್ಗಳ ಲೈಸೆನ್ಸ್ನ್ನೇ ರದ್ದು ಮಾಡಲಾಗುವುದು ಎಂದು ನಗರಾಭಿವೃದ್ಧಿ ಹಾಗೂ ವಸತಿ ಸಚಿವ ಯು.ಟಿ. ಖಾದರ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧವನ್ನು ರಾಜ್ಯದ ಎಲ್ಲ ಬಾರ್, ರೆಸ್ಟೋರೆಂಟ್, ಹೋಟೆಲ್, ಪಬ್, ಕ್ಲಬ್ಗಳಿಗೂ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ ಎಂದು ನಗರಾಭಿವೃದ್ಧಿ ಹಾಗೂ ವಸತಿ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಹೋಟೆಲ್, ಪಬ್, ರೆಸ್ಟೋರೆಂಟ್, ಕ್ಲಬ್ಗಳಲ್ಲಿ ಧೂಮಪಾನ ನಿಷೇಧ ಜಾರಿಯಲ್ಲಿತ್ತು. ಈಗ ಇದನ್ನು ರಾಜ್ಯದ ಎಲ್ಲಾ ಬಾರ್, ಪಬ್, ಕ್ಲಬ್, ರೆಸ್ಟೋರೆಂಟ್, ಹೋಟೆಲ್, ದರ್ಶಿನಿಗಳಿಗೂ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ ಎಂದಿದ್ದಾರೆ.