Select Your Language

Notifications

webdunia
webdunia
webdunia
webdunia

ಹಿಂದೂ ಹುಡುಗಿಯ ಕೈ ಮುಟ್ಟಿದರೆ ಆ ಕೈ ಇರಬಾರದು- ಅನಂತ್ ಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆ

ಹಿಂದೂ ಹುಡುಗಿಯ ಕೈ ಮುಟ್ಟಿದರೆ ಆ ಕೈ ಇರಬಾರದು- ಅನಂತ್ ಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆ
ಮಡಿಕೇರಿ , ಸೋಮವಾರ, 28 ಜನವರಿ 2019 (07:24 IST)
ಮಡಿಕೇರಿ : ಜಾತಿ ಪ್ರಶ್ನೆ ಇಲ್ಲದೆ ಹಿಂದೂ ಹುಡುಗಿಯ ಕೈ ಮುಟ್ಟಿದರೆ ಆ ಕೈ ಇರಬಾರದು ಎಂದು ಕೇಂದ್ರ ಕೌಶಲ್ಯ ಅಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗ್ಡೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಮಡಿಕೇರಿಯಲ್ಲಿ ಪರಿವರ್ತನಾ ಟ್ರಸ್ಟ್, ಹಿಂದೂ ಜಾಗರಣ ವೇದಿಕೆ ಆಯೋಜನೆ ಮಾಡಿದ್ದ ಸಾಮಾಜಿಕ ಸಮರಸತಾ ಸಮಾವೇಶ, ಹಿಂದೂ ಐಕ್ಯ ಸಮ್ಮೇಳನದಲ್ಲಿ ಮಾತನಾಡಿದ ಅವರು,’ ಜಾತಿ ವಿಷಬೀಜ ಸಮಾಜದಲ್ಲಿ ಸೇರಿಕೊಂಡ ಬಳಿಕ ನಾವು ನಿರ್ಮಾಣ ಮಾಡಿದ್ದನ್ನು ನಮ್ಮದು ಎಂದು ಹೇಳಿಕೊಳ್ಳುವ ಶಕ್ತಿಯನ್ನು ಕಳೆದುಕೊಂಡಿದ್ದೇವೆ. ನಮ್ಮ ಹಿಂದೂಗಳು ಒಗ್ಗಟ್ಟಾಗಿ ನಿಲ್ಲದೇ ಇದ್ದರೆ ಏನಾಗುತ್ತದೆ ಎಂಬುವುದನ್ನು ಇತಿಹಾಸ ನೋಡಿದರೆ ನಮಗೆ ಅರಿವಾಗುತ್ತದೆ’ ಎಂದು ತಿಳಿಸಿದ್ದಾರೆ.


 

‘ಇತಿಹಾಸ ಬರೆಯಲು ಮುಂದಾಗಬೇಕು. ಪೌರುಷ ಇದ್ದರೆ ಇತಿಹಾಸ ಬರೆಯಿರಿ. ದೇವರಿಗೆ ದುರ್ಬಲರೇ ಬೇಕಾಗಿದ್ದು, ಅದ್ದಕ್ಕೆ ಕುರಿ-ಕೋಳಿ ಬಲಿ ಕೊಡಲಾಗುತ್ತದೆ. ಆನೆ ಹುಲಿಯನ್ನು ದೇವರಿಗೆ ಬಲಿಕೊಡ್ತಾರಾ? ಆದ್ದರಿಂದ ದುರ್ಬಲರಾಗದೇ ಶೌರ್ಯ ವ್ಯಕ್ತಿಗಳಾಗಿ ಬೆಳೆಯಿರಿ. ಹಿಂದೂ ಸಮಾಜ ಒಟ್ಟಾಗಿ ನಿಲ್ಲದೇ ಇದ್ದರೆ ಮುಂದೆ ಕಷ್ಟವಾಗುತ್ತದೆ’  ಎಂದು ಹಿಂದೂ ಸಂಘಟನೆ ಹಾಗೂ ಪ್ರಸಕ್ತ ಸಮಾಜದಲ್ಲಿ ಯುವಕರಿಗೆ ಸಲಹೆ ನೀಡಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ

 


Share this Story:

Follow Webdunia kannada

ಮುಂದಿನ ಸುದ್ದಿ

ಲೋಕಸಭಾ ಚುನಾವಣೆಯಲ್ಲಿ ದೇವೇಗೌಡರ ವಿರುದ್ಧ ಸ್ಪರ್ಧಿಸುವ ಇಚ್ಚೆ ಹೊತ್ತ ಬಿಜೆಪಿ ನಾಯಕ ಯಾರು ಗೊತ್ತಾ?